ಬೆಂಗಳೂರು : ಬೆಂಗಳೂರಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದೆ. ಬಿಎಂಟಿಸಿ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ರಾಜಾಜಿನಗರದ ಒಂದನೇ ಬ್ಲಾಕ್‌ನಲ್ಲಿ ನಡೆದಿದೆ. ಭುವನ (9) ಸಾವಿಗೀಡಾದ ವಿದ್ಯಾರ್ಥಿ.

ನಗರದ ಪಾಂಚಜನ್ಯ ಸ್ಕೂಲ್‌ನ ವಿದ್ಯಾರ್ಥಿನಿ ರಸ್ತೆ ಬದಿಯಲ್ಲಿ ತೆರಳುತ್ತಿದ್ದಾಗ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದ್ದು, ಬಸ್ ಗುದ್ದಿದ ರಭಸಕ್ಕೆ ವಿದ್ಯಾರ್ಥಿನಿಗೆ ತೀವ್ರ ಪೆಟ್ಟಾಗಿದೆ. ಈ ವೇಳೆ ಸ್ಥಳೀಯರು ಬದುಕಿಸುವ ಪ್ರಯತ್ನ ಮಾಡಿದರು ಕೂಡ ಯಾವುದೇ ಪ್ರಯತ್ನ ಸಫಲವಾಗಲಿಲ್ಲ. ಸ್ಥಳದಲ್ಲೇ ವಿದ್ಯಾರ್ಥಿನಿ ಕೊನೆಯುಸಿರೆಳೆದಿದ್ದಾಳೆ. ಇನ್ನು ಬಿಎಂಟಿಸಿ ಬಸ್ ಚಾಲಕ ಸ್ಥಳದಿಂದ ಏಸ್ಕೇಪ್ ಆಗಿದ್ದು, ಸದ್ಯ ಪೊಲೀಸರು ಆತನಿಗಾಗಿ ಬಲೆ ಬೀಸಿದ್ದಾರೆ.