ಬೀದರ್ : ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದೆ. ಮನೆಯ ಪಕ್ಕದಲ್ಲಿ ಆಟ ಆಡುವಾಗ ಬಾಲಕನೊಬ್ಬ ಬಾವಿಗೆ ಬಿದ್ದು ಸಾವನ್ನಪ್ಪಿದ್ದ ದುರ್ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ಪಟ್ಟಣದ ಈಶ್ವರ ಕಾಲೋನಿಯಲ್ಲಿ ನಡೆದಿದೆ. 6 ವರ್ಷದ ಬಾಲಕ ಶೇಖ್ ನುಸ್ತಕಿಮ್ ಅಕ್ಬರ್ ಅಲಿ ಮೃತ ಬಾಲಕ.
ಮನೆಯ ಬಳಿ ಆಟ ಆಡುವ ವೇಳೆ ಆಕಸ್ಮಿಕವಾಗಿ ಶೇಖ್ ನುಸ್ತಕಿಮ್ ಅಕ್ಬರ್ ಅಲಿ ಬಾವಿಗೆ ಬಿದ್ದಿದ್ದಾನೆ. ವಿಷಯ ತಿಳಿದು ಸ್ಥಳಕ್ಕೆ ದೌಡಾಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ, ಬಾಲಕನ ಶವ ಹೊರತೆಗೆದಿದ್ದಾರೆ.
ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಬಾಲಕನ ಶವ ರವಾನೆ ಮಾಡಲಾಗಿದ್ದು, ಬಸವಕಲ್ಯಾಣ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.



















