ಬೆಂಗಳೂರು: ಕರ್ನಾಟಕ ಸರ್ಕಾರದ ಸಂಸ್ಥೆಯಲ್ಲಿ ಉದ್ಯೋಗ ಪಡೆಯಬೇಕು ಎಂದು ಹಂಬಲಿಸುತ್ತಿರುವವರಿಗೆ ಶುಭ ಸಮಾಚಾರ ಲಭಿಸಿದೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ 19 ಹುದ್ದೆಗಳ ನೇಮಕಾತಿಗಾಗಿ (NWKRTC Recruitment 2025) ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು 19 ಅಸಿಸ್ಟಂಟ್ ಟ್ರಾಫಿಕ್ ಪೋಲಿಸ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಆನ್‌ಲೈನ್ ಮೂಲಕ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ.
“ಹುದ್ದೆಗಳ ಸಂಕ್ಷಿಪ್ತ ವಿವರ”
ನೇಮಕಾತಿ ಸಂಸ್ಥೆ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ (NWKRTC)
ಒಟ್ಟು ಹುದ್ದೆಗಳು: 19
ಉದ್ಯೋಗ ಸ್ಥಳ: ಕರ್ನಾಟಕ
ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ನವೆಂಬರ್ 10
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ, ಬಿ.ಕಾಂ, ಬಿಇ ಅಥವಾ ಬಿ ಟೆಕ್ ಕೋರ್ಸ್ ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಕನಿಷ್ಠ 18 ರಿಂದ 35 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅರ್ಹರು. ನೇಮಕಾತಿ ಹೊಂದಿದವರಿಗೆ ಮಾಸಿಕ 33,320 ರೂ.ವರೆಗೆ ಸಂಬಳ ನೀಡಲಾಗುತ್ತದೆ.
2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷಗಳ ವಯೋಮಿತಿ ಸಡಿಲಿಕೆ ಇದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 750 ರೂ. ಅರ್ಜಿ ಶುಲ್ಕವಿದ್ದರೆ, ಎಸ್ಸಿ, ಎಸ್ಟಿ, ಮಾಜಿ ಸೈನಿಕರಿಗೆ 500 ರೂ. ಅರ್ಜಿ ಶುಲ್ಕವಿದೆ. ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ 250 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಅರ್ಹ ಹಾಗೂ ಆಸಕ್ತರು nwkrtc.karnataka.gov.in ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.