ಕಾರವಾರ : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಮತ್ತೆ ಹಳಿಯಾಳ ಶಾಸಕ ಆರ್.ವಿ.ದೇಶಪಾಂಡೆ ಅವರು ವ್ಯಂಗ್ಯವಾಡಿದ್ದಾರೆ.
ದಾಂಡೇಲಿಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮದಲ್ಲಿ ಮಾತನಾಡಿದ ಆರ್.ವಿ.ದೇಶಪಾಂಡೆ ಅವರು, ನಾನು ಮುಖ್ಯಮಂತ್ರಿ ಆಗಿದ್ದರೆ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡುತ್ತಿರಲಿಲ್ಲ, ಪುಕ್ಸಟ್ಟೆ ಗ್ಯಾರಂಟಿ ಯೋಜನೆ ಸರ್ಕಾರಕ್ಕೆ ಆರ್ಥಿಕ ಹೊರೆ ಆಗಿದೆ. ಜನರಿಗೆ ಅನುಕೂಲವಾಗಿರುವುದು ಒಂದೆಡೆಯಾದರೆ, ಇನ್ನೊಂದೆಡೆ ಸರ್ಕಾರ ನಡೆಸಲು ಕಷ್ಟವಾಗಿದೆ ಎಂದು ಹೇಳಿದ್ದಾರೆ.
ಮುಂದುವರೆದು ಮಾತನಾಡಿದ ಅವರು, ಮಹಿಳೆಯರು ಎಲ್ಲ ಸೌಲಭ್ಯಗಳನ್ನೂ ಪಡೆಯುತ್ತಿದ್ದಾರೆ. ಪುರುಷರಿಗೆ ಯಾವುದೇ ಯೋಜನೆಗಳು ಇಲ್ಲ. ಸರ್ಕಾರದ ಈ ಯೋಜನೆಗಳನ್ನು ಜನರಿಗೆ ತಲುಪಿಸಲು ಅನೇಕ ಸಮಿತಿಗಳನ್ನು ರಚಿಸಲಾಗಿದೆ. ಅವುಗಳನ್ನು ನಿಭಾಯಿಸುವುದೇ ಆಗಿದೆ. ಹೀಗಾಗಿ ರಾಜ್ಯದಲ್ಲಿ ಅಭಿವೃದ್ಧಿಯ ವೇಗ ತಗ್ಗಿದೆ ಎಂದು ಶಾಸಕ ಆರ್.ವಿ.ಡಿ ಪರೋಕ್ಷವಾಗಿ ಹೇಳಿದ್ದಾರೆ.