ಬೆಂಗಳೂರು: ನೀವು ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು, ಕೈತುಂಬ ಸಂಬಳ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಹೌದು, ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಪೆಟ್ರೋಲಿಯಂ ಆ್ಯಂಡ್ ಎಕ್ಸ್ ಪ್ಲೋಸಿವ್ಸ್ ಸೇಫ್ಟಿ ಆರ್ಗನೈಸೇಷನ್ (PESO Recruitment 2025) ಸಂಸ್ಥೆಯಲ್ಲಿ ಖಾಲಿ ಇರುವ 25 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಹುದ್ದೆಗಳ ಕುರಿತು ಮಾಹಿತಿ ಇಲ್ಲಿದೆ.
“ಹುದ್ದೆಗಳ ವಿವರ”
- ನೇಮಕಾತಿ ಸಂಸ್ಥೆ: ಪೆಟ್ರೋಲಿಯಂ ಆ್ಯಂಡ್ ಎಕ್ಸ್‌ಪ್ಲೋಸಿವ್ಸ್ ಸೇಫ್ಟಿ ಆರ್ಗನೈಸೇಷನ್ (PESO)
- ಹುದ್ದೆಗಳ ಹೆಸರು: ಸೀನಿಯರ್ ಟೆಕ್ನಿಕಲ್ ಅಸಿಸ್ಟಂಟ್ ಹಾಗೂ ಹಿಂದಿ ಆಫೀಸರ್
- ಒಟ್ಟು ಹುದ್ದೆಗಳು: 25
- ಉದ್ಯೋಗ ಸ್ಥಳ: ದೇಶಾದ್ಯಂತ
- ಅರ್ಜಿ ಸಲ್ಲಿಕೆ ವಿಧಾನ: ಆಫ್‌ಲೈನ್
- ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ನವೆಂಬರ್ 18
ಮಾನ್ಯತೆ ಪಡೆದ ಯಾವುದೇ ಮಂಡಳಿಗಳಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಕೋರ್ಸ್ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. ಗರಿಷ್ಠ 56 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕ ಇರುವುದಿಲ್ಲ. ಲಿಖಿತ ಪರೀಕ್ಷೆ, ದಾಖಲೆ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ peso.gov.in ವೆಬ್‌ಸೈಟ್‌ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು, ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
Chief Controller of Explosives,
5th Floor, CGO Complex,
Seminary Hills, Nagpur-440006