ಬಾಗಲಕೋಟೆ : ರಾಜ್ಯದ ಸರ್ಕಾರಿ ಸ್ಥಳಗಳಲ್ಲಿ RSS ಚಟುವಟಿಕೆ ನಿಷೇಧದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಮೊದಲ ಬಾರುಗೆ ಪ್ರತಿಕ್ರಿಯಿಸಿದ್ದಾರೆ.
ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬಂಡಿಗಣಿಯಲ್ಲಿ ಈ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಆ ಬಗ್ಗೆ ಪರಿಶೀಲಿಸಿ ತಮಿಳುನಾಡಿನಲ್ಲಿ ಯಾವ ರೀತಿ ಕ್ರಮ ಕೈಗೊಂಡಿದ್ದಾರೋ ಅದೇ ರೀತಿ ಕ್ರಮ ಕೈಗೊಳ್ಳಿ ಅಂತಾ ಸಿಎಸ್ಗೆ ಸೂಚಿಸಿರೋದಾಗಿ ತಿಳಿಸಿದ್ದಾರೆ.
ಸಚಿವ ಪ್ರಿಯಾಂಕ್ ಖರ್ಗೆ ಸಮರ್ಥನೆ : ರಾಜ್ಯದಲ್ಲಿ RSS ಚಟುವಟಿಕೆ ನಿಷೇಧಿಸುವಂತೆ ಸಿಎಂಗೆ ತಾವು ಪತ್ರ ಬರೆದಿರುವ ವಿಚಾರವನ್ನ ಸಚಿವ ಪ್ರಿಯಾಂಕ್ ಖರ್ಗೆ ಸಮರ್ಥಿಸಿಕೊಂಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಆರೆಸ್ಸೆಸ್ ವಿರೋಧಿ. ರಾಷ್ಟ್ರೀಯ ಸವಯಂ ಸೇವಕ ಸಂಘ ರಿಜಿಸ್ಟರ್ ಆಗಿರುವ ಕಾಪಿ ತೋರಿಸಿ ಎಂದು ಅವಾಲು ಹಾಕಿರುವುದಲ್ಲದೆ, RSS ತೆಗೆದರೆ ಬಿಜೆಪಿನೇ ಇರಲ್ಲ ಎಂದಿದ್ದಾರೆ. ಆರೆಸ್ಸೆಸ್ ಚಟುವಟಿಕೆಗಳನ್ನ ನಿಮ್ಮ ಮನೆಯಲ್ಲಿ ಮಾಡಿಕೊಳ್ಳಿ ಅಂತಲೂ ತಿಳಿಸಿದ್ದಾರೆ.