ದೆಹಲಿ : ದೆಹಲಿಯಲ್ಲಿ ನಡೆಯುತ್ತಿರುವ ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಎರಡನೇ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ನಲ್ಲಿ ವಿಂಡೀಸ್ ತಂಡ 390 ರನ್ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಭಾರತ ತಂಡದ ಗೆಲುವಿಗೆ 121 ರನ್ಗಳ ಟಾರ್ಗೆಟ್ ನೀಡಿದೆ.
ಮೊದಲ ಇನ್ನಿಂಗ್ಸ್ನಲ್ಲಿ ಭಾರತ 518 ರನ್ ಕಲೆಹಾಕಿ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತ್ತು. ಆ ಬಳಿಕ ಬ್ಯಾಟಿಂಗ್ ಆರಂಭಿಸಿದ ವಿಂಡೀಸ್ 248 ರನ್ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿತು. ಹೀಗಾಗಿ ಭಾರತ ಫಾಲೋ ಆನ್ ಹೇರಿ ವಿಂಡೀಸ್ಗೆ ಮತ್ತೆ ಬ್ಯಾಟಿಂಗ್ ಮಾಡಲು ಅವಕಾಶ ನೀಡಿತು.
ಆದರೆ ಎರಡನೇ ಇನ್ನಿಂಗ್ಸ್ನಲ್ಲಿ ಭಾರತಕ್ಕೆ ಪ್ರತಿರೋಧ ಒಡ್ಡಿದ ವಿಂಡೀಸ್ ತಂಡ 390 ರನ್ ಕಲೆಹಾಕುವುದಲ್ಲದೆ, ಇನ್ನಿಂಗ್ಸ್ ಸೋಲಿನಿಂದ ಪಾರಾಗಿ, ಭಾರತಕ್ಕೆ 121 ರನ್ಗಳ ಟಾರ್ಗೆಟ್ ನೀಡಿದೆ.