ಉಡುಪಿ: ಮೀನುಗಾರಿಕೆಗೆಂದು ಸಮುದ್ರಕ್ಕೆ ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲಾಗಿರುವ ಘಟನೆ ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದಲ್ಲಿ ನಡೆದಿದೆ.
ಸ್ಥಳೀಯ ನಿವಾಸಿಗಳಾದ ಸಂಕೇತ್ (16), ಸೂರಜ್ (15) ಹಾಗೂ ಆಶಿಶ್ (14) ಹೊಸಹಿತ್ಲು ಬೀಚ್‌ನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಸದ್ಯ ಮೂವರು ವಿದ್ಯಾರ್ಥಿಗಳ ಮೃತದೇಹ ಪತ್ತೆಯಾಗಿದೆ.
ಮೃತ ಮೂವರು ವಿದ್ಯಾರ್ಥಿಗಳ ಪೈಕಿ ಓರ್ವ ಪಿಯುಸಿ ವ್ಯಾಸಂಗ ಮಾಡುತ್ತಿದ್ದು, ಇನ್ನಿಬ್ಬರು ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದರು. ಶಾಲೆ ಮುಗಿಸಿ ಮೀನುಗಾರಿಕಾ ಕೆಲಸಕ್ಕೆ ಹೋಗಿದ್ದ ವೇಳೆ ಈ ಅವಘಡ ಸಂಭವಿಸಿದೆ.
ಸದ್ಯ ಘಟನಾ ಸ್ಥಳಕ್ಕೆ ಬೈಂದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.