ಬೆಂಗಳೂರು: ದೀಪಾವಳಿ ಹಬ್ಬದ ಸಲುವಾಗಿ ಪ್ರಯಾಣಿಕರ ದಟ್ಟಣೆ ನಿರ್ವಹಣೆ ಸಲುವಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬೆಂಗಳೂರಿನಿಂದ ವಿವಿಧ ಊರುಗಳಿಗೆ 2,500 ಹೆಚ್ಚುವರಿ ಬಸ್‌ಗಳನ್ನು ಘೋಷಿಸಿದೆ.
ಈ ಹೆಚ್ಚುವರಿ ಬಸ್‌ಗಳು ಅ. 17 ರಿಂದ 20 ರವರೆಗೆ ಇರಲಿದ್ದು, ಅಕ್ಟೋಬರ್ 22 ರಿಂದ 26 ರವರೆಗೆ ಹಿಂತಿರುಗುವ ಪ್ರಯಾಣವನ್ನು ನಿಗದಿಪಡಿಸಲಾಗಿದೆ. ಪ್ರಯಾಣಿಕರು ಕೆಎಸ್‌ಆರ್‌ಟಿಸಿ ರಿಸರ್ವೇಷನ್ ಕೌಂಟರ್‌ಗಳಲ್ಲಿ ಅಥವಾ www.ksrtc.karnataka.gov.in ಮೂಲಕ ಆನ್‌ಲೈನ್‌ನಲ್ಲಿ ಟಿಕೆಟ್‌ಗಳನ್ನು ಬುಕ್ ಮಾಡಬಹುದಾಗಿದೆ ಎಂದು ನಿಗಮ ಮಾಹಿತಿ ನೀಡಿದೆ.
“ಕೆಂಪೇಗೌಡ ಬಸ್ ನಿಲ್ದಾಣದಿಂದ ಹೊರಡುವ ಸ್ಪೆಷಲ್ ಬಸ್?”
ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಮಂಗಳೂರು, ಹುಬ್ಬಳ್ಳಿ, ಬೆಳಗಾವಿ, ಕಲಬುರಗಿ, ಬಳ್ಳಾರಿ, ಹೈದರಾಬಾದ್, ತಿರುಪತಿ ಮತ್ತು ವಿಜಯವಾಡದಂತಹ ಪ್ರಮುಖ ಸ್ಥಳಗಳಿಗೆ ಹೆಚ್ಚುವರಿ ಬಸ್ಸುಗಳ ಸಂಚಾರ ಇರಲಿದೆ.
ಮೈಸೂರು ರೋಡ್ ಸ್ಯಾಟಲೈಟ್ ನಿಲ್ದಾಣದಿಂದ ಹೊರಡುವ ಸ್ಪೆಷಲ್ ಬಸ್ ಪಟ್ಟಿ?
ಮೈಸೂರು ರೋಡ್ ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಮೈಸೂರು, ಮಡಿಕೇರಿ ಮತ್ತು ಕೊಡಗು ಪ್ರದೇಶದ ಇತರ ಪ್ರದೇಶಗಳಿಗೆ ಹೆಚ್ಚುವರಿ ಬಸ್ಸುಗಳ ಸಂಚಾರ ಇರಲಿದೆ. ಏತನ್ಮಧ್ಯೆ, ಶಾಂತಿನಗರದಿಂದ ಟಿಟಿಎಂಸಿ ಚೆನ್ನೈ, ಕೊಯಮತ್ತೂರು, ಮಧುರೈ ಮತ್ತು ಎರ್ನಾಕುಲಂ ಸೇರಿದಂತೆ ತಮಿಳುನಾಡು ಮತ್ತು ಕೇರಳದ ನಗರಗಳಿಗೆ ಬಸ್ಸುಗಳು ಸಂಚಾರ ಮಾಡಲಿವೆ.