ಬೆಂಗಳೂರು : ಬೆಂಗಳೂರಿನಲ್ಲಿ ಬೈಕ್ ಸವಾರನಿಗೆ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಕಪಾಳ ಮೋಕ್ಷ ಮಾಡಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.
ಬೆಂಗಳೂರಿನ ಸಿಲ್ಕ್ ಬೋರ್ಡ್ ಜಂಕ್ಷನ್ ನಲ್ಲಿ ಈ ಘಟನೆ ನಡೆದಿದೆ. ಬೈಕ್ ನಲ್ಲಿ ಬರುತ್ತಿದ್ದ ವ್ಯಕ್ತಿಯನ್ನು ಸಂಚಾರಿ ಪೊಲೀಸ್ ಅಧಿಕಾರಿಯೊಬ್ಬರು ತಡೆದಿದ್ದಾರೆ. ಈ ವೇಳೆ ದಾಖಲೆ ಪರಿಶೀಲನೆ ಮಾಡುವಾಗ ಅಧಿಕಾರಿ ಮತ್ತು ಬೈಕ್ ಸವಾರನ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಬೈಕ್ ಸವಾರನ ಕೆನ್ನೆಗೆ ಹೊಡೆದಿದ್ದಾನೆ.
ಈ ವಿಡಿಯೋವನ್ನು ಸ್ಥಳೀಯರೊಬ್ಬರು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.
ಪೋಲಿಸ್ ಅಧಿಕಾರಿಯ ಈ ಕೃತ್ಯ ಕಂಡು ಜನರು ಆಕ್ರೋಶಿಸುತ್ತಿದ್ದಾರೆ. ಹಾಗೂ ಕಮೆಂಟ್‌ನಲ್ಲಿ “ಈ ಗುಂಡಾ ಪೊಲೀಸರ ಮೇಲೆ ಕಠಿಣ ಕ್ರಮ ಕೈಗೊಳ್ಳಿ. ಇಲಾಖೆಯಲ್ಲಿ ನಮಗೆ ಅಂತಹ ಗುಂಡಾಗಳು ಅಗತ್ಯವಿಲ್ಲ” ಮೇಲಾಧಿಕಾರಿಗಳು ಕಠಿಣ ಕ್ರಮಕೈಗೊಳ್ಳಬೇಕೆಂದು ಕಿಡಿಕಾರುತ್ತಿದ್ದಾರೆ.