ಬೆಂಗಳೂರು : ಆರ್ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತದ ನಂತರ ಬೆಂಗಳೂರಿನ ಚಿನ್ನಸ್ವಾಮಿ ಅಂತರಾಷ್ಟ್ರೀಯ ಕ್ರೀಡಾಂಗಣದ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡಿತ್ತು. ಇದರ ಬೆನ್ನಲ್ಲೇ ಗುರವಾರ (ಅ.16) ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಬೆಂಗಳೂರು ನಗರದಲ್ಲಿ ಅಂತರರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣ ಮತ್ತು ಕ್ರೀಡಾ ಸಂಕೀರ್ಣ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ.
ಕರ್ನಾಟಕ ಗೃಹ ಮಂಡಳಿಯ ವತಿಯಿಂದ ಬೆಂಗಳೂರು ಸೂರ್ಯನಗರ – 4 ನೇ ಹಂತದ ಬಡಾವಣೆಯ ಸಮಗ್ರ ಅಭಿವೃದ್ಧಿ ಯೋಜನೆಯಡಿ 75 ಎಕರೆಯಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಮತ್ತು ಕ್ರೀಡಾಂಗಣ ಸಂಕೀರ್ಣ 2,350 ಕೋಟಿ ರೂ. ಯೋಜನಾ ಮೊತ್ತದಲ್ಲಿ ಅನುಷ್ಠಾನಗೊಳಿಸಲು ಗುರುವಾರ ನಡೆದ ಸಂಪುಟ ಒಪ್ಪಿಗೆ ನೀಡಿದೆ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.
80 ಸಾವಿರ ಆಸನ, 24 ವಿವಿಧ ಒಳಾಂಗಣ ಮತ್ತು ಹೊರಾಂಗಣ ಕ್ರೀಡೆಗೆ ಅವಕಾಶ |
ಸಂಪುಟ ಸಭೆಯ ನಂತರ ಈ ಕುರಿತು ಮಾತನಾಡಿದ ಅವರು, ಇದೊಂದು ಮಹತ್ವದ ಯೋಜನೆ ಆಗಿದೆ. 80 ಸಾವಿರ ಆಸನಗಳ ವ್ಯವಸ್ಥೆಯ ಕ್ರಿಕೆಟ್ ಕ್ರೀಡಾಂಗಣ, 24 ವಿವಿಧ ಒಳಾಂಗಣ ಮತ್ತು ಹೊರಾಂಗಣ ಕ್ರೀಡೆಗಳು ಹಾಗೂ 3000 ಆಸನ ಗಳ ಸಮಾವೇಶ ಸಭಾಂಗಣ ಸೇರಿ ವಿಶ್ವ ದರ್ಜೆಯ ಸೌಲಭ್ಯ ಇಲ್ಲಿ ಇರಲಿದ್ದು, ದೇಶದ ಅತಿ ದೊಡ್ಡ ಕ್ರೀಡಾಂಗಣ ಸಾಲಿಗೆ ಸೇರಲಿದೆ ಎಂದು ಹೇಳಿದ್ದಾರೆ.
ಸದರಿ ಯೋಜನೆ ಸಂಬಂಧ ಆಗಸ್ಟ್ 8ರಂದು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪ್ರಸ್ತಾವನೆ ತಯಾರಿಸಿ ಸಚಿವ ಸಂಪುಟ ಸಭೆಗೆ ಮಂಡಿಸಲು ಸೂಚಿಸಲಾಗಿತ್ತು. ಅದರಂತೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸದರಿ ಯೋಜನೆಯ ಪ್ರಸ್ತಾವನೆಯನ್ನು ಮಂಡಿಸಲಾಗಿ ಸಚಿವ ಸಂಪುಟದ ಸಭೆಯಲ್ಲಿ ತಾತ್ವಿಕ ಅನುಮೋದನೆ ದೊರೆತಿದೆ ಮಾಹಿತಿ