ಬೆಂಗಳೂರು: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿ (UIDAI Recruitment 2025) ಖಾಲಿ ಇರುವ 06 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅಸಿಸ್ಟಂಟ್ ಟೆಕ್ನಿಕಲ್ ಆಫೀಸರ್, ಪ್ರೈವೇಟ್ ಸೆಕ್ರೆಟರಿ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಕರ್ನಾಟಕದ ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಗುಡ್ ನ್ಯೂಸ್ ಆಗಿದೆ.
ನೇಮಕಾತಿ ಸಂಸ್ಥೆ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ
ಒಟ್ಟು ಹುದ್ದೆಗಳು: 06
ಉದ್ಯೋಗ ಸ್ಥಳ: ಬೆಂಗಳೂರು, ಕರ್ನಾಟಕ
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಅಕ್ಟೋಬರ್ 27
ಒಂದು ಪ್ರೈವೇಟ್ ಸೆಕ್ರೆಟರಿ, ಒಂದು ಅಸಿಸ್ಟಂಟ್ ಅಕೌಂಟ್ಸ್ ಆಫೀಸರ್ ಹಾಗೂ ನಾಲ್ಕು ಅಸಿಸ್ಟಂಟ್ ಟೆಕ್ನಿಕಲ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಪದವಿ, ಸಿಎ, ಎಂಬಿಎ, ಬಿಇ ಅಥವಾ ಬಿ.ಟೆಕ್ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 56 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 47 ಸಾವಿರ ರೂಪಾಯಿಯಿಂದ 1.51 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲಿಗೆ uidai.gov.in ವೆಬ್ ಸೈಟ್ ಗೆ ಭೇಟಿ ನೀಡಿ, ಅರ್ಜಿ ನಮೂನೆಯನ್ನು ಡೌನ್ ಲೋಡ್ ಮಾಡಿಕೊಳ್ಳಬೇಕು. ನಂತರ ಈ ಕೆಳಗಿನ ವಿಳಾಸಕ್ಕೆ ಅಗತ್ಯ ದಾಖಲೆಗಳೊಂದಿಗೆ ನಿಗದಿತ ಗಡುವಿನೊಳಗೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
Director (HR), Unique Identification Authority of India, Aadhaar Complex, NTI Layout, Tata Nagar, Kodigehalli, Technology Centre, Bengaluru – 560092