ವಾಷಿಂಗ್ಟನ್ ಡಿಸಿ : ಪಾಕಿಸ್ತಾನ ಹಾಗೂ ಅಫ್ಘಾನಿಸ್ತಾನದ ನಡುವೆ ನಡೆಯುತ್ತಿರುವ ಯುದ್ದದ ಕುರಿತು ಶುಕ್ರವಾರ ಶ್ವೇತಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, ಈ ಸಂಘರ್ಷವನ್ನು ಬಗೆಹರಿಸುವುದು ನನಗೆ ಬಹಳ ಸುಲಭ ಎಂದು ಹೇಳಿದ್ದಾರೆ.
ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆಯ ನಂತರ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಗಡಿ ಉದ್ವಿಗ್ನತೆ ಹೆಚ್ಚುತ್ತಿರುವ ಕುರಿತು ಮಾತನಾಡಿದ ಟ್ರಂಪ್, ಪಾಕಿಸ್ತಾನ ಅಫ್ಘಾನಿಸ್ತಾನದ ಮೇಲೆ ಯುದ್ದ ನಡೆಸಿದೆ ಅಥವಾ ಅಫ್ಘಾನಿಸ್ತಾನದ ಮೇಲೆ ದಾಳಿ ನಡೆಯುತ್ತಿದೆ ಎಂದು ನನಗೆ ಅರ್ಥವಾಗುತ್ತದೆ. ನಾನು ಅದನ್ನು ಪರಿಹರಿಸಬೇಕು ಎಂದು ಮನಸು ಮಾಡಿದರೆ ಪರಿಹರಿಸುವುದು ನನಗೆ ಸುಲಭವಾದ ಮಾರ್ಗವಾಗಿದೆ. ಎರಡು ದೇಶಗಳ ಸಂಘರ್ಷ ನಿವಾರಿಸುವಲ್ಲಿ ತಮಗೆ ಯಶಸ್ಸು ಸಿಗಲಿದೆ ಎಂದು ತಿಳಿಸಿದ್ದಾರೆ.
ಜನರು ಸಾಯುವುದನ್ನು ತಡೆಯುವುದು ನನಗೆ ಇಷ್ಟ. ನಾನು ಲಕ್ಷಾಂತರ ಜೀವಗಳನ್ನು ಉಳಿಸಿದ್ದೇನೆ. ಈ ಪ್ರಯತ್ನದಲ್ಲಿ ನಾವು ಯಶಸ್ವಿಯಾಗುತ್ತೇವೆ ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ.
ಪಾಕಿಸ್ತಾನ ಹಾಗೂ ಅಫ್ಘಾನಿಸ್ತಾನದ ನಡುವೆ ಈಗಾಗಲೇ 48ಗಂಟೆಗಳ ಕದನ ವಿರಾಮ ಘೋಷಿಸಿದ್ದರು, ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದ್ದು, ಪಾಕಿಸ್ತಾನ ವಾಯುಪಡೆ, ಅಪ್ಘಾನಿಸ್ತಾನದ ಗಡಿ ಪ್ರದೇಶದಲ್ಲಿ ಶೆಲ್ ದಾಳಿ ನಡೆಸಿದೆ. ಪಾಕಿಸ್ತಾನ ನಡೆಸಿದ ಈ ದಾಳಿಯಲ್ಲಿ ಮೂವರು ಸ್ಥಳೀಯ ಅಫ್ಘಾನಿಸ್ತಾನ ಕ್ರಿಕೆಟಿಗರು ಸೇರಿ 8 ಮಂದಿ ಸಾವನ್ನಪ್ಪಿದ್ದಾರೆ