ಉಡುಪಿ : ಆಟೋ ರಿಕ್ಷಾಕ್ಕೆ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಬೈಂದೂರು ತಾಲ್ಲೂಕಿನಲ್ಲಿ ಇಂದು(ಶನಿವಾರ) ಮಧ್ಯಾಹ್ನ ನೆಡೆದಿದೆ. ಶಿರೂರು ಗ್ರಾಮದ ಹಡವಿನಕೋಣೆಯ ನಿವಾಸಿ ಕರಾ ಇಲಿಯಾಸ್ (49) ಮೃತಪಟ್ಟ ಚಾಲಕ.

ಮಲ್ಪೆಯಿಂದ ಭಟ್ಕಳ ಕಡೆಗೆ ಸಾಗುತ್ತಿದ್ದ ಮೀನಿನ ವಾಹನ ಶಿರೂರು ಮಾರ್ಕೆಟ್ ಕಡೆಗೆ ಸಾಗುತ್ತಿದ್ದ ಆಟೋ ರಿಕ್ಷಾಕ್ಕೆ ಹಿಂದಿನಿಂದ ಢಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ರಿಕ್ಷಾ ನುಜ್ಜುಗುಜ್ಜಾಗಿದ್ದು, ರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸದ್ಯ ಈ ಸಂಬಂಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.