ಬೆಂಗಳೂರು: ದೇಶದ ಷೇರುಪೇಟೆ ನಿಯಂತ್ರಣ ಸಂಸ್ಥೆಯಾಗಿರುವ ಸೆಬಿಯಲ್ಲಿ (SEBI Grade A Recruitment 2025) ಖಾಲಿ ಇರುವ 110 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ವಿವರ
ಹುದ್ದೆಯ ಹೆಸರು: ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್ ಚೇಂಜ್ ಬೋರ್ಡ್ ಆಫ್ ಇಂಡಿಯಾ (SEBI)
ಒಟ್ಟು ಹುದ್ದೆ: 110
ಹುದ್ದೆಗಳ ಹೆಸರು: ಅಸಿಸ್ಟಂಟ್ ಮ್ಯಾನೇಜರ್
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಅಕ್ಟೋಬರ್ 30
ಕಾನೂನು, ಸಂಶೋಧನೆ, ಎಂಜಿನಿಯರಿಂಗ್ ಸೇರಿ ಹಲವು ವಿಭಾಗಗಳಲ್ಲಿ ಅಸಿಸ್ಟಂಟ್ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸಲು ಬಯಸುವವರು ಅರ್ಜಿ ಸಲ್ಲಿಸಬಹುದು. ಒಬಿಸಿ, ಇಡಬ್ಲ್ಯೂಎಸ್ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು 1,000 ರೂ. ಅರ್ಜಿ ಶುಲ್ಕ ಪಾವತಿಸಬೇಕಾಗುತ್ತದೆ. ಎಸ್ಸಿ, ಎಸ್ಟಿ, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳು 100 ರೂ. ಶುಲ್ಕ ಪಾವತಿಸಬೇಕಾಗುತ್ತದೆ. ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಹಂತ I, ಹಂತ II ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ನೇಮಕಾತಿ ಹೊಂದಿದವರಿಗೆ ಮಾಸಿಕ 1.84 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಸ್ನಾತಕೋತ್ತರ ಪದವಿ, ಪಿಜಿ ಡಿಪ್ಲೋಮಾ, ಎಲ್ ಎಲ್ ಬಿ, ಎಂಜಿನಿಯರಿಂಗ್ ಪದವಿ ಪಡೆದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.
ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲಿಗೆ ಅಧಿಕೃತ ವೆಬ್ ಸೈಟ್ https://www.sebi.gov.in/ ಗೆ ಭೇಟಿ ನೀಡಬೇಕು.
- ನಿಮಗೆ ಅನ್ವಯಿಸುವ ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಿಕೊಳ್ಳಬೇಕು.
- ಹುದ್ದೆಯ ಅಧಿಸೂಚನೆ ಓದಬೇಕು
- ಆನ್ಲೈನ್ ಅರ್ಜಿ ನಮೂನೆಯ ಲಿಂಕ್ ಓಪನ್ ಮಾಡಬೇಕು
- ಯಾವುದೇ ತಪ್ಪಿಲ್ಲದೆ ಎಲ್ಲ ವಿವರಗಳನ್ನು ಭರ್ತಿ ಮಾಡಬೇಕು
- ದಾಖಲೆಗಳನ್ನು ಅಪ್ ಲೋಡ್ ಮಾಡಿ ಅರ್ಜಿ ಸಲ್ಲಿಸಬೇಕು
- ಫ್ಯೂಚರ್ ರೆಫರೆನ್ಸ್ ಗಾಗಿ ಅರ್ಜಿಯ ಪ್ರತಿಯನ್ನು ಪ್ರಿಂಟ್ ತೆಗೆದಿಟ್ಟುಕೊಳ್ಳಬೇಕು