ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ (NFL Recruitment 2025) ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಚೀಫ್ ಮ್ಯಾನೇಜರ್ ಹಾಗೂ ಸೀನಿಯರ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಕೆ, ವಿದ್ಯಾರ್ಹತೆ ಸೇರಿ ನೇಮಕಾತಿ ಅಧಿಸೂಚನೆ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ (NFL)
ಹುದ್ದೆಗಳ ಹೆಸರು: ಚೀಫ್ ಮ್ಯಾನೇಜರ್ ಹಾಗೂ ಸೀನಿಯರ್ ಮ್ಯಾನೇಜರ್
ಒಟ್ಟು ಹುದ್ದೆಗಳು: 04
ಉದ್ಯೋಗ ಸ್ಥಳ: ದೇಶದ ಹಲವೆಡೆ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ: ಅಕ್ಟೋಬರ್ 31
ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಬಿಎಸ್ಸಿ, ಎಂಬಿಎ, ಪಿಜಿಡಿಬಿಎಂ, ಪಿಜಿಡಿಎಂ ಹಾಗೂ ಎಂಎಸ್ಸಿ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಗರಿಷ್ಠ 52 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. ಚೀಫ್ ಮ್ಯಾನೇಜರ್ ಹುದ್ದೆಗೆ ನೇಮಕಾತಿ ಹೊಂದಿದವರಿಗೆ ವರ್ಷಕ್ಕೆ 30 ಲಕ್ಷ ರೂಪಾಯಿ ಪ್ಯಾಕೇಜ್ ಇದ್ದರೆ, ಸೀನಿಯರ್ ಮ್ಯಾನೇಜರ್ ಹುದ್ದೆಗೆ ನೇಮಕಾತಿ ಹೊಂದಿದವರಿಗೆ ವರ್ಷಕ್ಕೆ 26 ಲಕ್ಷ ರೂಪಾಯಿ ಪ್ಯಾಕೇಜ್ ಇದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ಸೈಟ್ nationalfertilizers.com ಗೆ ಭೇಟಿ ನೀಡಬೇಕು
ಚೀಫ್ ಮ್ಯಾನೇಜರ್ ಹಾಗೂ ಸೀನಿಯರ್ ಮ್ಯಾನೇಜರ್ ಹುದ್ದೆಯ ಅಧಿಸೂಚನೆಯನ್ನು ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು.
ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದ ರೀತಿ ಭರ್ತಿ ಮಾಡಿ, ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಬೇಕು