ಬೆಂಗಳೂರು: ಕರ್ನಾಟಕ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಜವಾಹರ ಲಾಲ್ ನೆಹರು ತಾರಾಲಯದಲ್ಲಿ (JNP Recruitment 2025) ಖಾಲಿ ಇರುವ ಎರಡು SDA, FDA ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಬೆಂಗಳೂರಿನಲ್ಲಿಯೇ ಉದ್ಯೋಗ ಹುಡುಕುತ್ತಿರುವವರಿಗೆ ಇದು ಒಳ್ಳೆಯ ಅವಕಾಶವಾಗಿದೆ. ಅರ್ಜಿ ಸಲ್ಲಿಸುವುದು ಹೇಗೆ? ವೇತನ ಎಷ್ಟು ಎಂಬುದರ ಮಾಹಿತಿ ಇಲ್ಲಿದೆ.
“ಹುದ್ದೆಗಳ ಸಂಕ್ಷಿಪ್ತ ವಿವರ”
ನೇಮಕಾತಿ ಸಂಸ್ಥೆ: ಜವಾಹರ ಲಾಲ್ ನೆಹರು ತಾರಾಲಯ
ಒಟ್ಟು ಹುದ್ದೆಗಳು: 02
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಅಕ್ಟೋಬರ್ 31
ಹುದ್ದೆಯ ಹೆಸರು: ಎಸ್ ಡಿಎ, ಎಫ್ ಡಿಎ
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ ಅಥವಾ ಸ್ನಾತಕೋತ್ತರ ಕೋರ್ಸ್ ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಲಿಖಿತ ಪರೀಕ್ಷೆ, ಸಂದರ್ಶನ ಹಾಗೂ ದಾಖಲೆ ಪರಿಶೀಲನೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 83 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವವರಿಗೆ ಕಂಪ್ಯೂಟರ್ ಜ್ಞಾನ ಅಗತ್ಯ ಎಂದು ತಿಳಿಸಲಾಗಿದೆ.
“ಅರ್ಜಿ ಸಲ್ಲಿಸುವುದು ಹೇಗೆ”?
ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಮೊದಲಿಗೆ taralaya.karnataka.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅರ್ಜಿ ನಮೂನೆಯ ಪ್ರಿಂಟ್ ಔಟ್ ತೆಗೆದುಕೊಳ್ಳಬೇಕು. ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ನಿರ್ದೇಶಕರು, ಜವಾಹರ್ ಲಾಲ್ ನೆಹರು ತಾರಾಲಯ, ಶ್ರೀ ಟಿ. ಚೌಡಯ್ಯ ರಸ್ತೆ, ಹೈ ಗೌಂಡ್ಸ್, ಬೆಂಗಳೂರು – 560001 ವಿಳಾಸಕ್ಕೆ ಕಳುಹಿಸಬೇಕು. ಸಂದರ್ಶನಕ್ಕೆ ಹಾಜರಾಗುವ ಹೊರ ಜಿಲ್ಲೆಯ ಅಭ್ಯರ್ಥಿಗಳಿಗೆ ನಿಯಮಾನುಸಾರ ಪ್ರಯಾಣ ಭತ್ಯೆಯನ್ನು (TA) ಮರುಪಾವತಿಸಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.