ಚಿತ್ರದುರ್ಗ: ಸಂಸ್ಕೃತ ಹಾಗೂ ವೇದಾಧ್ಯನ ಮಾಡುವ ವಿದ್ಯಾರ್ಥಿಯೊಬ್ಬ ದೂರದ ಊರಿನಲ್ಲಿರುವ ಅವರ ಪೋಷಕರಿಗೆ ಬೇರೊಬ್ಬರ ಮೊಬೈಲ್‌ನಿಂದ ಕರೆ ಮಾಡಿದಕ್ಕಾಗಿ ಅಲ್ಲಿನ ಮುಖ್ಯ ಶಿಕ್ಷಕ ವಿದ್ಯಾರ್ಥಿಯ ಮೇಲೆ ಹಲ್ಲೆ ಮಾಡಿದ್ದಾನೆ.
ಈ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿಯ ತಿಪ್ಪೇರುದ್ರ ಸ್ವಾಮಿ ದೇವಾಲಯದ ಸುಪರ್ಧಿಯ ಸಂಸ್ಕೃತ ವೇಧಾಧ್ಯಯನ ಶಾಲೆಯಲ್ಲಿ ನಡೆದಿದೆ. ವಿದ್ಯಾರ್ಥಿ ಕೈ ಮುಗಿದರೂ ಬಿಡದೆ ಕಾಲಲ್ಲಿ ತುಳಿದು ಮುಖ್ಯ ಶಿಕ್ಷಕ ವೀರೇಶ್ ಹಿರೇಮಠ ಮನಸೋ ಇಚ್ಚೆಯಿಂದ ಹಲ್ಲೆವೆಸಗಿದ್ದಾರೆ.
ವಿದ್ಯಾರ್ಥಿ ಮೇಲೆ ಕ್ರೌರ್ಯ ಮೆರೆದ ದೃಷ್ಯ ಮೊಬೈಲಲ್ಲಿ ಸೆರೆ ಹಿಡಿದಿದ್ದು, ವಿಡಿಯೋ ವೈರಲ್ ಆಗಿದೆ. ವಿದ್ಯಾರ್ಥಿಯ ಮೇಲಿನ ಹಲ್ಲೆಗೆ ಸರ್ವಜನಿಕ ವಲಯದಲ್ಲಿ ಅಸಮಧಾನ ವ್ಯಕ್ತಪಡಿಸಿದ್ದಾರೆ. ಇದೀಗ ಮುಖ್ಯ ಶಿಕ್ಷಕ ವೀರೇಶ್ ಹಿರೇಮಠ್ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸುತ್ತಿದ್ದಾರೆ.