ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಬೆಳಕಿನ ಹಬ್ಬಕ್ಕೆ ಶುಭಕೋರಿ ದೇಶವಾಸಿಗಳಿಗೆ ಪ್ರಧಾನಿ ಮೋದಿ ಸುದೀರ್ಘ ಪತ್ರ: ಪತ್ರದಲ್ಲೇನಿದೆ?

October 21, 2025
Share on WhatsappShare on FacebookShare on Twitter

ನವದೆಹಲಿ: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ದೇಶವಾಸಿಗಳನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಪತ್ರವೊಂದನ್ನು ಬರೆದಿದ್ದಾರೆ. ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತ್ಯುತ್ತರವಾಗಿ ಭಾರತದ ಸಶಸ್ತ್ರ ಪಡೆಗಳು ನಡೆಸಿದ ‘ಆಪರೇಷನ್ ಸಿಂದೂರ’ ಕಾರ್ಯಾಚರಣೆಗೆ ಶ್ರೀರಾಮನ ಆದರ್ಶವನ್ನು ಪತ್ರದಲ್ಲಿ ಉದಾಹರಿಸಿದ್ದಾರೆ. ಭಾರತವು ಕೇವಲ ಧರ್ಮವನ್ನು ಎತ್ತಿಹಿಡಿಯಲಿಲ್ಲ, ಬದಲಿಗೆ ಅನ್ಯಾಯದ ವಿರುದ್ಧ ಪ್ರತೀಕಾರವನ್ನೂ ತೀರಿಸಿಕೊಂಡಿದೆ ಎಂದು ಅವರು ತಿಳಿಸಿದ್ದಾರೆ.

“ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರ ನಿರ್ಮಾಣದ ನಂತರ ಇದು ಎರಡನೇ ದೀಪಾವಳಿ. ಭಗವಾನ್ ಶ್ರೀರಾಮನು ನಮಗೆ ಧರ್ಮವನ್ನು ಎತ್ತಿಹಿಡಿಯಲು ಕಲಿಸುತ್ತಾನೆ ಮತ್ತು ಅನ್ಯಾಯದ ವಿರುದ್ಧ ಹೋರಾಡುವ ಧೈರ್ಯವನ್ನು ನೀಡುತ್ತಾನೆ. ಕೆಲವು ತಿಂಗಳ ಹಿಂದೆ ‘ಆಪರೇಷನ್ ಸಿಂದೂರ’ದ ಸಮಯದಲ್ಲಿ ನಾವು ಇದರ ಜೀವಂತ ಉದಾಹರಣೆಯನ್ನು ನೋಡಿದ್ದೇವೆ” ಎಂದು ಮೇ 7 ರಿಂದ 10ರವರೆಗೆ ನಡೆದ ಕಾರ್ಯಾಚರಣೆಯನ್ನು ಉಲ್ಲೇಖಿಸಿ ಅವರು ಹೇಳಿದ್ದಾರೆ.

ಇದಲ್ಲದೆ, “ಈ ವರ್ಷದ ದೀಪಾವಳಿಯು ವಿಶೇಷವಾಗಿದೆ. ಏಕೆಂದರೆ ಹಲವಾರು ಜಿಲ್ಲೆಗಳನ್ನು ನಕ್ಸಲ್ ಮುಕ್ತಗೊಳಿಸಲಾಗಿದ್ದು, ಅಂತಹ ಜಿಲ್ಲೆಗಳಲ್ಲೂ ಇದೇ ಮೊದಲ ಬಾರಿಗೆ ದೀಪಗಳನ್ನು ಬೆಳಗಿಸಲಾಗುತ್ತಿದೆ. ಈ ಜಿಲ್ಲೆಗಳಲ್ಲಿ ನಕ್ಸಲಿಸಂ ಮತ್ತು ಮಾವೋವಾದಿ ಭಯೋತ್ಪಾದನೆಯನ್ನು ಬೇರುಸಹಿತ ಕಿತ್ತೊಗೆಯಲಾಗಿದೆ” ಎಂದು ಪ್ರಧಾನಿ ತಿಳಿಸಿದ್ದಾರೆ. ಇತ್ತೀಚೆಗೆ 300ಕ್ಕೂ ಹೆಚ್ಚು ನಕ್ಸರರು ಶರಣಾಗಿರುವುದನ್ನು ಉಲ್ಲೇಖಿಸಿ, “ಹಲವರು ಹಿಂಸೆಯ ಮಾರ್ಗವನ್ನು ತ್ಯಜಿಸಿ, ದೇಶದ ಸಂವಿಧಾನದಲ್ಲಿ ನಂಬಿಕೆ ವ್ಯಕ್ತಪಡಿಸಿ, ಅಭಿವೃದ್ಧಿಯ ಮುಖ್ಯವಾಹಿನಿಗೆ ಸೇರುತ್ತಿರುವುದು ರಾಷ್ಟ್ರದ ಒಂದು ದೊಡ್ಡ ಸಾಧನೆಯಾಗಿದೆ” ಎಂದು ಅವರು ಹೇಳಿದ್ದಾರೆ.

ಜಾಗತಿಕ ಸಂಘರ್ಷಗಳ ನಡುವೆ ಭಾರತವು ಸ್ಥಿರತೆ ಮತ್ತು ಸಂವೇದನಾಶೀಲತೆಯ ಸಂಕೇತವಾಗಿ ಹೊರಹೊಮ್ಮಿದೆ. ಶೀಘ್ರದಲ್ಲೇ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗುವತ್ತ ನಾವು ಸಾಗುತ್ತಿದ್ದೇವೆ. ‘ವಿಕಸಿತ ಭಾರತ’ ಮತ್ತು ‘ಆತ್ಮನಿರ್ಭರ ಭಾರತ’ ನಿರ್ಮಾಣದ ಪಯಣದಲ್ಲಿ ನಮ್ಮ ಕರ್ತವ್ಯಗಳನ್ನು ಪೂರೈಸುವುದು ನಾಗರಿಕರಾದ ನಮ್ಮೆಲ್ಲರ ಪ್ರಾಥಮಿಕ ಜವಾಬ್ದಾರಿಯಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ.

ಈ ಐತಿಹಾಸಿಕ ಸಾಧನೆಗಳ ನಡುವೆ, ದೇಶವು ಮುಂದಿನ ಪೀಳಿಗೆಯ ಸುಧಾರಣೆಗಳಿಗೂ ಮುಂದಾಗಿದೆ. ನವರಾತ್ರಿಯ ಮೊದಲ ದಿನದಂದು ಜಾರಿಗೆ ತಂದ ಜಿಎಸ್‌ಟಿ ಕಡಿತದಿಂದ ‘ಜಿಎಸ್‌ಟಿ ಉಳಿತಾಯ ಉತ್ಸವ’ದ ಸಮಯದಲ್ಲಿ ನಾಗರಿಕರು ಸಾವಿರಾರು ಕೋಟಿ ರೂಪಾಯಿಗಳನ್ನು ಉಳಿತಾಯ ಮಾಡುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಪ್ರಧಾನಿ ಮೋದಿಯವರ ಪತ್ರದ ಪೂರ್ಣಪಾಠ ಇಲ್ಲಿದೆ:
ಪ್ರಿಯ ದೇಶಬಾಂಧವರೇ,
ಶಕ್ತಿ ಮತ್ತು ಉತ್ಸಾಹದಿಂದ ತುಂಬಿದ ದೀಪಾವಳಿಯ ಶುಭ ಸಂದರ್ಭದಲ್ಲಿ ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಶುಭಾಶಯಗಳು. ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರ ನಿರ್ಮಾಣದ ನಂತರ ಇದು ಎರಡನೇ ದೀಪಾವಳಿ. ಭಗವಾನ್ ಶ್ರೀರಾಮನು ನಮಗೆ ಧರ್ಮವನ್ನು ಎತ್ತಿಹಿಡಿಯಲು ಕಲಿಸುತ್ತಾನೆ ಮತ್ತು ಅನ್ಯಾಯದ ವಿರುದ್ಧ ಹೋರಾಡುವಂಥ ಶಕ್ತಿಯನ್ನು ನೀಡುತ್ತಾನೆ. ಕೆಲವು ತಿಂಗಳ ಹಿಂದೆ ‘ಆಪರೇಷನ್ ಸಿಂದೂರ’ದ ಸಮಯದಲ್ಲಿ ನಾವು ಇದರ ಜೀವಂತ ಉದಾಹರಣೆಯನ್ನು ನೋಡಿದ್ದೇವೆ. ‘ಆಪರೇಷನ್ ಸಿಂದೂರ’ದ ವೇಳೆ ಭಾರತವು ಕೇವಲ ಧರ್ಮವನ್ನಷ್ಟೇ ಎತ್ತಿಹಿಡಿಯಲಿಲ್ಲ, ಅನ್ಯಾಯಕ್ಕೆ ತಕ್ಕ ಪ್ರತೀಕಾರವನ್ನೂ ತೀರಿಸಿಕೊಂಡಿತು.

ಈ ದೀಪಾವಳಿ ವಿಶೇಷವಾಗಿದೆ, ಏಕೆಂದರೆ ದೇಶದಾದ್ಯಂತ ನಕ್ಸಲ್ ಪೀಡಿತವಾಗಿದ್ದ ಕುಗ್ರಾಮಗಳು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇದೇ ಮೊದಲ ಬಾರಿಗೆ ದೀಪಗಳನ್ನು ಬೆಳಗಿಸಲಾಗುತ್ತಿದೆ. ಈ ಜಿಲ್ಲೆಗಳಲ್ಲಿ ನಕ್ಸಲಿಸಂ ಮತ್ತು ಮಾವೋವಾದಿ ಭಯೋತ್ಪಾದನೆಯನ್ನು ಬೇರುಸಹಿತ ಕಿತ್ತೊಗೆಯಲಾಗಿದೆ. ಇತ್ತೀಚಿನ ದಿನಗಳಲ್ಲಿ, ಅನೇಕ ವ್ಯಕ್ತಿಗಳು ಹಿಂಸೆಯ ಮಾರ್ಗವನ್ನು ತ್ಯಜಿಸಿ, ನಮ್ಮ ದೇಶದ ಸಂವಿಧಾನದಲ್ಲಿ ನಂಬಿಕೆಯಿರಿಸಿ, ಮುಖ್ಯವಾಹಿನಿಗೆ ಸೇರುತ್ತಿರುವುದನ್ನು ನಾವು ನೋಡಿದ್ದೇವೆ. ಇದು ರಾಷ್ಟ್ರದ ಒಂದು ದೊಡ್ಡ ಸಾಧನೆಯಾಗಿದೆ.

ಈ ಐತಿಹಾಸಿಕ ಸಾಧನೆಗಳ ನಡುವೆ, ದೇಶವು ಇತ್ತೀಚಿನ ದಿನಗಳಲ್ಲಿ ಮುಂದಿನ ಪೀಳಿಗೆಯ ಸುಧಾರಣೆಗಳಿಗೂ ಮುಂದಾಗಿದೆ. ನವರಾತ್ರಿಯ ಮೊದಲ ದಿನದಂದು, ಕಡಿಮೆ ಜಿಎಸ್‌ಟಿ ದರಗಳನ್ನು ಜಾರಿಗೆ ತರಲಾಯಿತು. ಈ ‘ಜಿಎಸ್‌ಟಿ ಉಳಿದಾಯ ಉತ್ಸವ’ದ ಸಮಯದಲ್ಲಿ, ನಾಗರಿಕರು ಸಾವಿರಾರು ಕೋಟಿ ರೂಪಾಯಿಗಳನ್ನು ಉಳಿತಾಯ ಮಾಡುತ್ತಿದ್ದಾರೆ.

ಹಲವಾರು ಬಿಕ್ಕಟ್ಟುಗಳನ್ನು ಎದುರಿಸುತ್ತಿರುವ ಜಗತ್ತಿನಲ್ಲಿ, ಭಾರತವು ಸ್ಥಿರತೆ ಮತ್ತು ಸಂವೇದನಾಶೀಲತೆಯ ಸಂಕೇತವಾಗಿ ಹೊರಹೊಮ್ಮಿದೆ. ನಾವು ಮುಂದಿನ ದಿನಗಳಲ್ಲಿ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗುವ ಹಾದಿಯಲ್ಲಿದ್ದೇವೆ.

ಈ ‘ವಿಕಸಿತ ಭಾರತ್’ (ಅಭಿವೃದ್ಧಿ ಹೊಂದಿದ ಭಾರತ) ಮತ್ತು ‘ಆತ್ಮನಿರ್ಭರ ಭಾರತ್’ (ಸ್ವಾವಲಂಬಿ ಭಾರತ) ಪಯಣದಲ್ಲಿ, ರಾಷ್ಟ್ರಕ್ಕಾಗಿ ನಮ್ಮ ಕರ್ತವ್ಯಗಳನ್ನು ಪೂರೈಸುವುದು ನಾಗರಿಕರಾದ ನಮ್ಮೆಲ್ಲರ ಪ್ರಾಥಮಿಕ ಜವಾಬ್ದಾರಿಯಾಗಿದೆ.

ನಾವು ‘ಸ್ವದೇಶಿ’ (ಸ್ಥಳೀಯ ಉತ್ಪನ್ನಗಳು) ಅಳವಡಿಸಿಕೊಳ್ಳೋಣ ಮತ್ತು “ಇದು ಸ್ವದೇಶಿ!” ಎಂದು ಹೆಮ್ಮೆಯಿಂದ ಹೇಳೋಣ. ‘ಏಕ್ ಭಾರತ್, ಶ್ರೇಷ್ಠ ಭಾರತ್’ ಸ್ಫೂರ್ತಿಯನ್ನು ಉತ್ತೇಜಿಸೋಣ. ಎಲ್ಲಾ ಭಾಷೆಗಳನ್ನು ಗೌರವಿಸೋಣ. ಸ್ವಚ್ಛತೆಯನ್ನು ಕಾಪಾಡೋಣ. ನಮ್ಮ ಆರೋಗ್ಯಕ್ಕೆ ಆದ್ಯತೆ ನೀಡೋಣ. ನಮ್ಮ ಆಹಾರದಲ್ಲಿ ಎಣ್ಣೆಯ ಬಳಕೆಯನ್ನು ಶೇ.10ರಷ್ಟು ಕಡಿಮೆ ಮಾಡೋಣ ಮತ್ತು ಯೋಗಾಭ್ಯಾಸವನ್ನು ಮೈಗೂಡಿಸಿಕೊಳ್ಳೋಣ. ಈ ಎಲ್ಲಾ ಪ್ರಯತ್ನಗಳು ನಮ್ಮನ್ನು ಶೀಘ್ರವಾಗಿ ‘ವಿಕಸಿತ ಭಾರತ’ದ ಕಡೆಗೆ ಕೊಂಡೊಯ್ಯುತ್ತವೆ.

ಒಂದು ದೀಪವು ಮತ್ತೊಂದು ದೀಪವನ್ನು ಬೆಳಗಿದಾಗ ಅದರ ಬೆಳಕು ಕಡಿಮೆಯಾಗುವುದಿಲ್ಲ, ಬದಲಾಗಿ ಮತ್ತಷ್ಟು ಹೆಚ್ಚುತ್ತದೆ ಎಂಬುದನ್ನು ದೀಪಾವಳಿ ನಮಗೆ ಕಲಿಸುತ್ತದೆ. ಅದೇ ಸ್ಫೂರ್ತಿಯೊಂದಿಗೆ, ಈ ದೀಪಾವಳಿಯಂದು ನಮ್ಮ ಸಮಾಜ ಮತ್ತು ಸುತ್ತಮುತ್ತಲಲ್ಲಿ ಸಾಮರಸ್ಯ, ಸಹಕಾರ ಮತ್ತು ಸಕಾರಾತ್ಮಕತೆಯ ದೀಪಗಳನ್ನು ಬೆಳಗಿಸೋಣ.

ಮತ್ತೊಮ್ಮೆ, ನಿಮ್ಮೆಲ್ಲರಿಗೂ ದೀಪಾವಳಿಯ ಹಾರ್ದಿಕ ಶುಭಾಶಯಗಳು.
ತಮ್ಮ ವಿಶ್ವಾಸಿ,
ನರೇಂದ್ರ ಮೋದಿ
Tags: Karnataka News beatNarendra ModinewdelhiPrime Minister
SendShareTweet
Previous Post

ಕೇವಲ 12 ದಿನದಲ್ಲಿ 23 ಲಕ್ಷಕ್ಕೂ ಹೆಚ್ಚು ಭಕ್ತರಿಂದ ಹಾಸನಾಂಬೆಯ ದರ್ಶನ!  

Next Post

ವಿಶ್ವದ ಅತಿ ಭಾರ, ಅತಿ ದುಬಾರಿ ಚಿನ್ನದ ಉಡುಪು ದುಬೈನಲ್ಲಿ ಅನಾವರಣ

Related Posts

ಬೆಚ್ಚಿ ಬೀಳಿಸೋ ಘಟನೆ.. ಅವಳಿ ಹೆಣ್ಣುಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ತಂದೆ!
ದೇಶ

ಬೆಚ್ಚಿ ಬೀಳಿಸೋ ಘಟನೆ.. ಅವಳಿ ಹೆಣ್ಣುಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ತಂದೆ!

“ಮೋದಿ ಭಾಷಣದಲ್ಲಿ ಮಹಿಳೆಯರಿಗಿಂತ ಕಾಂಗ್ರೆಸ್ ಜಪವೇ ಹೆಚ್ಚಿತ್ತು” : ಮಲ್ಲಿಕಾರ್ಜುನ ಖರ್ಗೆ ಟೀಕೆ
ದೇಶ

“ಮೋದಿ ಭಾಷಣದಲ್ಲಿ ಮಹಿಳೆಯರಿಗಿಂತ ಕಾಂಗ್ರೆಸ್ ಜಪವೇ ಹೆಚ್ಚಿತ್ತು” : ಮಲ್ಲಿಕಾರ್ಜುನ ಖರ್ಗೆ ಟೀಕೆ

ಕಾರವಾರ ಶಾಸಕ ಸತೀಶ್ ಸೈಲ್ ಪುತ್ರಿ ಸಾಧ್ವಿಗೆ “ಮಿಸ್ ಇಂಡಿಯಾ ವರ್ಲ್ಡ್” ಕಿರೀಟ : ಭುವನೇಶ್ವರದಲ್ಲಿ ಮಿಂಚಿದ ಕರಾವಳಿ ಬೆಡಗಿ
ದೇಶ

ಕಾರವಾರ ಶಾಸಕ ಸತೀಶ್ ಸೈಲ್ ಪುತ್ರಿ ಸಾಧ್ವಿಗೆ “ಮಿಸ್ ಇಂಡಿಯಾ ವರ್ಲ್ಡ್” ಕಿರೀಟ : ಭುವನೇಶ್ವರದಲ್ಲಿ ಮಿಂಚಿದ ಕರಾವಳಿ ಬೆಡಗಿ

ನೋಯ್ಡಾ ಕಾರ್ಮಿಕರ ಹಿಂಸಾತ್ಮಕ ಪ್ರತಿಭಟನೆಯ ಮಾಸ್ಟರ್‌ಮೈಂಡ್ ತಮಿಳುನಾಡಿನಲ್ಲಿ ಅರೆಸ್ಟ್
ದೇಶ

ನೋಯ್ಡಾ ಕಾರ್ಮಿಕರ ಹಿಂಸಾತ್ಮಕ ಪ್ರತಿಭಟನೆಯ ಮಾಸ್ಟರ್‌ಮೈಂಡ್ ತಮಿಳುನಾಡಿನಲ್ಲಿ ಅರೆಸ್ಟ್

“ವಿಪಕ್ಷಗಳಿಂದ ಮಹಿಳಾ ಹಕ್ಕುಗಳ ಭ್ರೂಣಹತ್ಯೆ” : ಮೀಸಲಾತಿ ಮಸೂದೆ ಸೋಲಿನ ಬಳಿಕ ಪ್ರಧಾನಿ ಮೋದಿ ಆಕ್ರೋಶ
ದೇಶ

“ವಿಪಕ್ಷಗಳಿಂದ ಮಹಿಳಾ ಹಕ್ಕುಗಳ ಭ್ರೂಣಹತ್ಯೆ” : ಮೀಸಲಾತಿ ಮಸೂದೆ ಸೋಲಿನ ಬಳಿಕ ಪ್ರಧಾನಿ ಮೋದಿ ಆಕ್ರೋಶ

5 ದಿನ ಹಿಂದೆ ಮನೆ ಕೆಲಸಕ್ಕೆ ಸೇರಿದವ 30 ಲಕ್ಷ ರೂ. ಚಿನ್ನಾಭರಣ ದೋಚಿ ಪರಾರಿ!
ದೇಶ

5 ದಿನ ಹಿಂದೆ ಮನೆ ಕೆಲಸಕ್ಕೆ ಸೇರಿದವ 30 ಲಕ್ಷ ರೂ. ಚಿನ್ನಾಭರಣ ದೋಚಿ ಪರಾರಿ!

Next Post
ವಿಶ್ವದ ಅತಿ ಭಾರ, ಅತಿ ದುಬಾರಿ ಚಿನ್ನದ ಉಡುಪು ದುಬೈನಲ್ಲಿ ಅನಾವರಣ

ವಿಶ್ವದ ಅತಿ ಭಾರ, ಅತಿ ದುಬಾರಿ ಚಿನ್ನದ ಉಡುಪು ದುಬೈನಲ್ಲಿ ಅನಾವರಣ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬ್ಯಾಟಿಂಗ್ ವೈಫಲ್ಯಕ್ಕೆ ರುತುರಾಜ್ ಗಾಯಕ್ವಾಡ್ ಅಸಮಾಧಾನ : ಹೈದರಾಬಾದ್ ವಿರುದ್ಧ ಸಿಎಸ್‌ಕೆ ಎಡವಿದ್ದೆಲ್ಲಿ?

ಬ್ಯಾಟಿಂಗ್ ವೈಫಲ್ಯಕ್ಕೆ ರುತುರಾಜ್ ಗಾಯಕ್ವಾಡ್ ಅಸಮಾಧಾನ : ಹೈದರಾಬಾದ್ ವಿರುದ್ಧ ಸಿಎಸ್‌ಕೆ ಎಡವಿದ್ದೆಲ್ಲಿ?

ಕೃಷಿಹೊಂಡದಲ್ಲಿ ಇಬ್ಬರು ಕಾರ್ಮಿಕರ ಮೃತದೇಹ ಪತ್ತೆ – ಈಜಲು ಹೋಗಿ ಸಾವನ್ನಪ್ಪಿರುವ ಶಂಕೆ?

ಕೃಷಿಹೊಂಡದಲ್ಲಿ ಇಬ್ಬರು ಕಾರ್ಮಿಕರ ಮೃತದೇಹ ಪತ್ತೆ – ಈಜಲು ಹೋಗಿ ಸಾವನ್ನಪ್ಪಿರುವ ಶಂಕೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat