ಕಲಬುರಗಿ : ಬಿಜೆಪಿ – ಕಾಂಗ್ರೆಸ್ ಕಾರ್ಯಕರ್ತರ ಪೋಸ್ಟರ್ ವಾರ್ ಕಲಬುರಗಿಯಲ್ಲಿ ನಡೆದಿದೆ. ಯಾರು ಸಂವಿಧಾನ ಪ್ರೀತಿಸುತ್ತಾರೆ ಅವರು ದೇಶವನ್ನು ಪ್ರೀಸುತ್ತಾರೆ ಎಂದು ಕಾಂಗ್ರೆಸ್ ಶಾಸಕರು ಪೋಸ್ಟರ್ ಅಂಟಿಸಿ ಪ್ರತಿಭಟಿಸಿದ್ದಾರೆ.
ಇತ್ತ ಐ ಲವ್ RSS ಎನ್ನುವ ಬಿಜೆಪಿ ಶಾಸಕರು ಪೋಸ್ಟರ್ ಅಂಟಿಸಿ ಪ್ರತಿಭಟನೆ ನಡೆಸಿದರೆ ಅತ್ತ ಪ್ರಿಯಾಂಕ ಖರ್ಗೆ ಭಾವಚಿತ್ರ ಇರುವ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ಶಾಸಕರು ಪ್ರತಿಭಟಿಸುತ್ತಿದ್ದಾರೆ.
ಇದೀಗ ಅನುಮತಿ ಪಡೆಯದೇ ಸಾರ್ವಜನಿಕ ಸ್ಥಳಗಳಲ್ಲಿ ಪೋಸ್ಟರ್ ಅಂಟಿಸಲಾಗಿದೆ ಎಂದು ಶಿವಸೇನೆ ರಾಜ್ಯಾಧ್ಯಕ್ಷ ಆಂದೋಲಾ ಸಿದ್ದಲಿಂಗ ಸ್ವಾಮಿಜಿ ದೂರು ನೀಡಿದ್ದಾರೆ. ಅನುಮತಿ ಇಲ್ಲದೇ ಪೋಸ್ಟರ್ ಅಂಟಿಸಿರುವ ಕಾಂಗ್ರೆಸ್ ಕಾರ್ಯರ್ತರ ವಿರುದ್ದ ಕ್ರಮ ಕೈಗೊಳ್ಳಲು ಪಾಲಿಕೆ ಆಯುಕ್ತರಿಗೆ ಕೆಲ ಸ್ಥಳೀಯರು ಆಗ್ರಹಿಸಿದ್ದಾರೆ.