ರಾಯಚೂರು : ಡಿಸಿಎಂ ಡಿಕೆ ಶಿವಕುಮಾರ್ ಅವರಿಂದು ಪತ್ನಿಯೊಂದಿಗೆ ಮಂತ್ರಾಲಯಕ್ಕೆ ಭೇಟಿ ನೀಡಿ, ಶ್ರೀ ರಾಯರ ದರ್ಶನ ಪಡೆದರು. ಬಳಿಕ ರಾಯರ ಅನುಗ್ರಹಕ್ಕಾಗಿ ಬೆಲ್ಲದ ತುಲಾಭಾರ ನೆರವೇರಿಸಿದರು.
ದರ್ಶನ ಬಳಿಕ ಡಿಕೆ ಶಿವಕುಮಾರ್ ಅವರು ಶ್ರೀ ಸುಬುಧೇಂದ್ರ ತೀರ್ಥ ಶ್ರೀಗಳನ್ನು ಭೇಟಿಯಾಗಿ ಶ್ರೀಮಠದ ಬಗ್ಗೆ ಮಾಹಿತಿ ಪಡೆದರು. ಈ ವೇಳೆ ಶ್ರೀಮಠದಿಂದ ಡಿಕೆಶಿ ದಂಪತಿಗೆ ಶಾಲು ಹೊದಿಸಿ ಸನ್ಮಾನಿಸಲಾಯಿತು.
ಶ್ರೀಗಳ ಭೇಟಿ ಬಳಿಕ ಮಾತನಾಡಿದ ಅವರು, ಶ್ರೀಮಠದಿಂದ ಮಂತ್ರಾಲಯಕ್ಕೆ ಬರಲು ಆಹ್ವಾನವಿತ್ತು. ರಾಯರ ಅನುಗ್ರಹಕ್ಕಾಗಿ ಬಹಳ ದಿನಗಳಿಂದ ಬರಬೇಕೆಂದು ಇದ್ದೆ. ಗುರುಗಳ ಅನುಗ್ರಹ ಎಲ್ಲಕ್ಕೂ ಅವಶ್ಯಕ. ಇಂದು ವಿಶೇಷ ದಿನವಾಗಿದ್ದು, ಶ್ರೀಮಠದ ಭೂಮಿ ಪೂಜೆ ಕಾರ್ಯಕ್ರಮದಲ್ಲೂ ಭಾಗಿಯಾದೆ. ಕಳೆದ ಬಾರಿ ಸಂಕಲ್ಪ ಮಾಡಿದ್ದಕ್ಕೆ ನಮ್ಮ ಸರ್ಕಾರ ಬಂದಿದೆ. ಎಲ್ಲರಿಗೆ, ನಾಡಿಗೆ ಒಳ್ಳೆಯದಾಗಲಿ ಅಂತ ಬೇಡಿಕೊಂಡಿದ್ದೇನೆ ಎಂದರು.