ಬೆಂಗಳೂರು: ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಉದ್ಯೋಗ ಹಿಡಿಯಬೇಕು, ಅದರಲ್ಲೂ ಬೆಂಗಳೂರಿನಲ್ಲಿ ಭವಿಷ್ಯ ರೂಪಿಸಿಕೊಳ್ಳಬೇಕು ಎನ್ನುವವರಿಗೆ ಸಿಹಿ ಸುದ್ದಿ ದೊರೆತಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಯುನಾನಿ ಮೆಡಿಸಿನ್ (NIUM Recruitment 2025) ಸಂಸ್ಥೆಯಲ್ಲಿ ಖಾಲಿ ಇರುವ 31 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಯುನಾನಿ ಮೆಡಿಸಿನ್
ಒಟ್ಟು ಹುದ್ದೆಗಳು: 31
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ನವೆಂಬರ್ 3
ಉದ್ಯೋಗ ಸ್ಥಳ: ಬೆಂಗಳೂರು, ಕರ್ನಾಟಕ
NIUM ಸಂಸ್ಥೆಯಲ್ಲಿ ಡ್ರೈವರ್, ಮೆಡಿಕಲ್ ಲ್ಯಾಬ್ ಟೆಕ್ನಾಲಜಿಸ್ಟ್, ಜಾಯಿಂಟ್ ಡೈರೆಕ್ಟರ್, ರೆಸಿಡೆಂಟ್ ಮೆಡಿಕಲ್ ಆಫೀಸರ್, ನರ್ಸಿಂಗ್ ಆಫೀಸರ್, ಜೂನಿಯರ್ ಎಂಜಿನಿಯರ್ ಸೇರಿ ಹಲವು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. 25 ವರ್ಷದಿಂದ 56 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಎಸ್ಸೆಸ್ಸೆಲ್ಸಿ, ಪಿಯುಸಿ, ಡಿಪ್ಲೋಮಾ, ಪದವಿ, ಬಿಎಸ್ಸಿ, ಎಂಬಿಬಿಎಸ್ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 18 ಸಾವಿರ ರೂಪಾಯಿಯಿಂದ 2.09 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 1,600 ರೂಪಾಯಿ ಹಾಗೂ ಉಳಿದ ಅಭ್ಯರ್ಥಿಗಳಿಗೆ 2 ಸಾವಿರ ರೂಪಾಯಿ ಅರ್ಜಿ ಶುಲ್ಕವಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲಿಗೆ nium.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅರ್ಜಿಯನ್ನು ಡೌನ್ ಲೋಡ್ ಮಾಡಿಕೊಂಡು, ಅರ್ಜಿಯ ಜತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ The Director, National Institute of Unani Medicine, Kottigepalya, Magadi Main Road, Bengaluru–560091 ವಿಳಾಸಕ್ಕೆ ಕಳುಹಿಸಬಹುದು.



















