ಮಂಗಳೂರು: ಗೋಪಾಲಕೃಷ್ಣ ಅನುದಾನಿತ ಶಾಲಾ ಶಿಕ್ಷಕಿಯ ಮೃತದೇಹ ಬಾವಿಯಲ್ಲಿ ಪತ್ತೆ ಆಗಿದೆ. ಈ ಘಟನೆ ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿಯ ಬೂಡುಮುಗೇರುವಿನ ನಿವಾಸಿ ತೇಜಸ್ವಿನಿ (23) ಅವರ ಮೃತದೇಹ ಎನ್ನಲಾಗಿದೆ.
ಇವರು ಕಳೆದ ಎರಡು ವರ್ಷಗಳಿಂದ ಶಾಲೆಯಲ್ಲಿ ಗೌರವ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಇವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರೆನ್ನಲಾಗಿದ್ದು, ಕಾಲು ಜಾರಿ ಬಾವಿಗೆ ಬಿದ್ದರೇ, ಅಥವಾ ಆತ್ಮಹತ್ಯೆ ಮಾಡಿಕೊಂಡರೇ ಎಂಬುದು ಇನ್ನು ಖಚಿತವಾಗಿಲ್ಲ.
ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತರು ತಂದೆ, ತಾಯಿ, ಸಹೋದರಿಯರು, ಬಂಧು ಬಳಗವನ್ನು ಅಗಲಿದ್ದಾರೆ.