ಶನಿವಾರ ಸಿಡ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ 3ನೇ ಏಕದಿನ ಪಂದ್ಯದ ನಂತರ ಅಭಿಮಾನಿಯೊಬ್ಬರು ಬೀಳಿಸಿದ ಭಾರತೀಯ ಧ್ವಜವನ್ನು ಎತ್ತಿಕೊಳ್ಳುವ ಮೂಲಕ ವಿರಾಟ್ ಕೊಹ್ಲಿ ದೇಶಪ್ರೇಮ ಮೆರೆದಿದ್ದಾರೆ.
ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಎರಡು ಬಾರಿ ಶೂನ್ಯಕ್ಕೆ ಔಟಾಗಿದ್ದ ಕೊಹ್ಲಿ, ಮೂರನೇ ಪಂದ್ಯದಲ್ಲಿ ಅಜೇಯ 74 ರನ್ ಗಳಿಸುವ ಮೂಲಕ ಭಾರತ 9 ವಿಕೆಟ್‌ಗಳ ಗೆಲುವು ಸಾಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ರೋಹಿತ್ ಶರ್ಮಾ ಕೂಡ ಅಜೇಯ 121 ರನ್ ಗಳಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಸದ್ಯ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ವಿಡಿಯೋದಲ್ಲಿ, ಕೊಹ್ಲಿ ಡ್ರೆಸ್ಸಿಂಗ್ ಕೋಣೆಗೆ ಹಿಂತಿರುಗುವಾಗ ಸಿಡ್ನಿ ಅಭಿಮಾನಿಗಳೊಂದಿಗೆ ಮಾತುಕತೆ ನಡೆಸುತ್ತಿರುವುದು ಕಂಡುಬಂದಿದೆ. ಈ ವೇಳೆ ಭಾರತೀಯ ಅಭಿಮಾನಿಯೊಬ್ಬರು ರಾಷ್ಟ್ರೀಯ ಧ್ವಜವನ್ನು ಬೀಳಿಸುವುದನ್ನು ಕಂಡ ಕೊಹ್ಲಿ, ಕೂಡಲೇ ಅದನ್ನು ಅವರಿಗೆ ಎತ್ತಿಕೊಟ್ಟಿದ್ದಾರೆ. ಕೊಹ್ಲಿ ನಡೆಗೆ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
ಇದನ್ನೂ ಓದಿ : ಪ್ರೀತಿಸುವಂತೆ ಫ್ಯಾಷನ್ ಡಿಸೈನರ್‌ಗೆ ಟಾರ್ಚರ್ – EVP ಫಿಲ್ಮ್ ಸಿಟಿ ಮಾಲೀಕನ ವಿರುದ್ಧ ಬೆಂಗಳೂರಲ್ಲಿ FIR!



















