ಕೊಪ್ಪಳ: ಇಲ್ಲಿನ ಬಿಜೆಪಿ ಯುವ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಪ್ರಮುಖ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಕೊನೆಗೂ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳನ್ನು ಇಲ್ಲಿನ ಲಿಂಗರಾಜ್ ಕ್ಯಾಂಪಿನ ರವಿ ಬಸವರಾಜ ಹಾಗೂ ಗುಂಡಮ್ಮ ಕ್ಯಾಂಪಿನ ನಿವಾಸಿ ಗಂಗಾಧರ ಗೌಳಿ ಎಂದು ಗುರುತಿಸಲಾಗಿದೆ.
ಬಿಜೆಪಿ ಯುವ ಮುಖಂಡನ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳು ತಲೆಮರೆಸಿಕೊಂಡಿದ್ದರಿಂದ ಗಂಗಾವತಿ ಪೊಲೀಸರಿಗೆ ಈ ಪ್ರಕರಣ ಸವಾಲಾಗಿ ಪರಿಣಮಿಸಿತ್ತು. ಇದರಿಂದ ತೀವ್ರ ತನಿಖೆಗೆ ಕೈಗೊಂಡು, ಪ್ರಕರಣದ ಪ್ರಮುಖ ಆರೋಪಿಗಳನ್ನು ಕೊನೆಗೂ ಮೂರು ವಾರಗಳ ಬಳಿಕ ಬಂಧಿಸಿದ್ದಾರೆ.
ಇದೀಗ ಪೊಲೀಸ್ ಭದ್ರತೆಯಲ್ಲಿ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಇದನ್ನು ಓದಿ : ಭಂಡಾರ್ಕಾರ್ಸ್ ಕಾಲೇಜು : ರಾಜ್ಯೋತ್ಸವ ‘ಸುವರ್ಣಾಕ್ಷ’ ಕಾರ್ಯಕ್ರಮ



















