ಬೆಂಗಳೂರು: ಶಿಕ್ಷಣ ಕಾಶಿ ಧಾರವಾಡದಲ್ಲಿರುವ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಮೂರು ಯಂಗ್ ಪ್ರೊಫೆಷನಲ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ನೇರ ಸಂದರ್ಶನದ ಮೂಲಕ ಹುದ್ದೆಗೆ ನೇಮಕಾತಿ ನಡೆಸಲಾಗುತ್ತಿದೆ. ನವೆಂಬರ್ 4 ಸಂದರ್ಶನ ನಡೆಯಲಿದ್ದು, ಹುದ್ದೆಯ ವಿವರ, ಶೈಕ್ಷಣಿಕ ಅರ್ಹತೆ, ನೇಮಕಾತಿ ಪ್ರಕ್ರಿಯೆಯ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಯ ಸಂಕ್ಷಿಪ್ತ ಮಾಹಿತಿ
ನೇಮಕಾತಿ ಸಂಸ್ಥೆ: ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ
ಒಟ್ಟು ಹುದ್ದೆ: 04
ಹುದ್ದೆ ಹೆಸರು: ಯಂಗ್ ಪ್ರೊಫೆಷನಲ್
ಉದ್ಯೋಗ ಸ್ಥಳ: ಧಾರವಾಡ
ಆಯ್ಕೆ ಪ್ರಕ್ರಿಯೆ: ನೇರ ಸಂದರ್ಶನ
ಧಾರವಾಡ ವಿಶ್ವವಿದ್ಯಾಲಯ ಹೊರಡಿಸಿರುವ ಅಧಿಕೃತ ಅಧಿಸೂಚನೆಯ ಪ್ರಕಾರ, ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಎಂಎಸ್ಸಿ ಪದವಿ ಪೂರ್ಣಗೊಳಿಸಿರಬೇಕು ಎಂದು ತಿಳಿಸಲಾಗಿದೆ. ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 25 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ uasd.edu ವೆಬ್ ಸೈಟ್ ಗೆ ಭೇಟಿ ನೀಡಬಹುದು.
ನೇರ ಸಂದರ್ಶನದ ದಿನಾಂಕ, ಸಮಯ
ಆಸಕ್ತ ಅಭ್ಯರ್ಥಿಗಳು ನವೆಂಬರ್ 4ರಂದು ಬೆಳಗ್ಗೆ 10 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿರುತ್ತದೆ. ಸಂದರ್ಶನ ನಡೆಯುವ ಸ್ಥಳ: Chamber of Assoc. Director of Research (HQ), Krishinagar, Dharwad-580005, Karnataka.
ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ 51 ವೈದ್ಯರು, ಸ್ಟಾಫ್ ನರ್ಸ್ ಹುದ್ದೆಗಳ ನೇಮಕಾತಿ: ಇಂದೇ ಅರ್ಜಿ ಸಲ್ಲಿಸಿ



















