ಕರ್ನಾಟಕ ರತ್ನ ಪವರ್ ಸ್ಟಾರ್ ಡಾ. ಪುನೀತ್ ರಾಜ್ ಕುಮಾರ್ ಅಗಲಿ ಇಂದಿಗೆ 4 ವರ್ಷ ಕಳೆದಿದೆ. ಇದರ ಪ್ರಯುಕ್ತ 4ನೇ ವರ್ಷದ ಪುಣ್ಯಸ್ಮರಣೆ ಹಮ್ಮಿಕೊಳ್ಳಲಾಗಿದೆ.

ಇವರ ಪುಣ್ಯಸ್ಮರಣೆ ಹಿನ್ನೆಲೆ ಕಂಠೀರವ ಸ್ಟುಡಿಯೋದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಪುನೀತ್ ಸಮಾಧಿಗೆ ಬಣ್ಣ ಬಣ್ಣದ ಗುಲಾಬಿ ಹೂವಿನ ಅಲಂಕಾರ ಮಾಡಲಾಗಿದೆ. ದೊಡ್ಮನೆ ಕುಟುಂಬ ಬೆಳಗ್ಗೆ 10 ಗಂಟೆ ಸುಮಾರಿಗೆ ಪುನೀತ್ ಸಮಾಧಿಗೆ ಪೂಜೆ ನೆರವೇರಿಸಲಿದ್ದು, ಅವರ ಇಷ್ಟದ ಖಾದ್ಯಗಳನ್ನಿಟ್ಟು ಪೂಜೆ ಮಾಡಲಿದ್ದಾರೆ.
ಅಪ್ಪು ಸ್ಮಾರಕದ ಬಳಿ ಅನ್ನದಾನ,ರಕ್ತದಾನ, ಬಡ ಮಕ್ಕಳಿಗೆ ನೋಟ್ ಬುಕ್ ವಿತರಣೆ ಮಾಡಲಾಗುತ್ತದೆ. ರಾಜ್ಯದ ಮೂಲೆ ಮೂಲಗಳಿಂದ ಅಭಿಮಾನಿಗಳು ಆಗಮಿಸಿ, ಅಪ್ಪುಗೆ ನಮನ ಸಲ್ಲಿಸಲಿದ್ದಾರೆ. ಅಲ್ಲದೇ, ರಾಜ್ಯಾದ್ಯಂತ ಅವರ ಅಭಿಮಾನಿಗಳು ತಾವಿರುವ ಸ್ಥಳದಿಂದಲೇ ಅಪ್ಪುಗೆ ನಮನ ಸಲ್ಲಿಸುತ್ತಿದ್ದಾರೆ.
ಇದನ್ನೂ ಓದಿ : ಬೆಳ್ಳಿಯ ಮೇಲೂ ಇನ್ನು ಸಿಗಲಿದೆ ಸಾಲ: ಈ ಹೊಸ ನಿಯಮಗಳನ್ನು ತಿಳಿದುಕೊಳ್ಳಿ



















