ಬೆಂಗಳೂರು: ಸರ್ಕಾರಿ ವಕೀಲೆಯೊಬ್ಬರು ಲಂಚ ಪಡೆಯುತ್ತಿದ್ದ ವೇಳೆ ರೆಡ್‌ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಲತಾ ಪಬ್ಲಿಕ್ ಪ್ರಾಸಿಕ್ಯೂಟರ್ ಲೋಕಾಯುಕ್ತರ ಬಲೆಗೆ ಬಿದ್ದ ವಕೀಲೆ. ಬೇಲ್ ಅರ್ಜಿಯ ವಿಚಾರವಾಗಿ ತಕರಾರು ಅರ್ಜಿ ಸಲ್ಲಿಸಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ವೇಳೆ ಲೋಕಯುಕ್ತರು ದಾಳಿ ನಡೆಸಿದ್ದಾರೆ.
ರಾಜ ಎಂಬುವವರ ತಕರಾರು ಅರ್ಜಿಯ ವಿಚಾರವಾಗಿ ಅರ್ಜಿ ಸಲ್ಲಿಸುವುದಕ್ಕೆ 1200 ರೂ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ರಾಜ ಅವರು ಲೋಕಾಯುಕ್ತರಿಗೆ ದೂರು ನೀಡಿದ್ದಾರೆ. ಆ ದೂರಿನ ಮೇರೆಗೆ ದಾಳಿ ಮಾಡಿದ ಲೋಕಾಯುಕ್ತರು, ಸಿಟಿ ಸಿವಿಲ್ ಕೋರ್ಟ್ ಹಾಲ್ 46 ರಲ್ಲಿ ಹಣ ಪಡೆಯುತಿದ್ದ ವೇಳೆ ವಕೀಲೆಯನ್ನು ವಶಕ್ಕೆ ಪಡೆದಿದ್ದಾರೆ.
ವಕೀಲೆ ಲತಾ ಅವರು ಅನೇಕ ಜನರಿಂದ ಇದೆ ರೀತಿಯಾಗಿ ಹಣ ಪಡೆದಿದ್ದಾರೆಂಬ ಆರೋಪ ಕೂಡ ಕೇಳಿ ಬಂದಿದೆ. ಸದ್ಯಕ್ಕೆ ಲೋಕಾ ಪೊಲೀಸರು ಲತಾ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ | ಕರ್ನಾಟಕ ನ್ಯೂಸ್ ಬೀಟ್ ಗ್ರೌಂಡ್ ರಿಪೋರ್ಟ್



















