ಬೆಂಗಳೂರು: ಕರ್ನಾಟಕ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು, ಒಳ್ಳೆಯ ಸಂಬಳ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಗುಡ್ ನ್ಯೂಸ್ ಸಿಕ್ಕಿದೆ. ರಾಜ್ಯದ ಕಂದಾಯ ಇಲಾಖೆಯಲ್ಲಿ (Karnataka Revenue Department Recruitment 2025) ಖಾಲಿ ಇರುವ ಮೂರು ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಫೈನಾನ್ಸ್ ಆ್ಯಂಡ್ ಆಡಿಟ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಕರ್ನಾಟಕ ಕಂದಾಯ ಇಲಾಖೆ
ಹುದ್ದೆಗಳ ಹೆಸರು: ಫೈನಾನ್ಸ್ ಆ್ಯಂಡ್ ಆಡಿಟ್ ಆಫೀಸರ್
ಒಟ್ಟು ಹುದ್ದೆಗಳು: 03
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ 9
ಶಿರಸ್ತೆದಾರ, ಫೈನಾನ್ಸ್ ಆ್ಯಂಡ್ ಆಡಿಟ್ ಆಫೀಸರ್ ಹಾಗೂ ಜೂನಿಯರ್ ಪ್ರೋಗ್ರಾಮರ್ ಆ್ಯಂಡ್ ನೆಟ್ ವರ್ಕಿಂಗ್ ಮ್ಯಾನೇಜರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಫಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಂ ಟೆಕ್, ಎಂ ಕಾಂ, ಎಂಎಸ್ಸಿ ಹಾಗೂ ಬಿ.ಇ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಗರಿಷ್ಠ 65 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.
ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 55 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲಿಗೆ kandaya.karnataka.gov.in ಗೆ ಭೇಟಿ ನೀಡಬೇಕು. ಅರ್ಜಿಯ ಪ್ರಿಂಟ್ ಔಟ್ ತೆಗೆದುಕೊಂಡು, ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
Office of the Special Officer & Competent Authority, Podium Block, 03rd & 04th Floor, Visvesvaraya Tower, Bengaluru-560001
ಇದನ್ನೂ ಓದಿ : ಬೆಂಗಳೂರು | ಕೋಟಿ ಕೋಟಿ ಆಸ್ತಿ ಬರೆದುಕೊಟ್ಟು ಮಗಳಂತೆ ಸಾಕಿದ್ದ ಮನೆಗೆ ಕನ್ನ ಹಾಕಿದ ಯುವತಿ ಅರೆಸ್ಟ್!



















