ಬೆಂಗಳೂರು : RSS ಪಥಸಂಚಲನದಲ್ಲಿ ಭಾಗಿಯಾಗಿದ್ದಕ್ಕೆ ಲಿಂಗಸೂಗೂರು ಪಿಡಿಒ ಪ್ರವೀಣ್ ಕುಮಾರ್ ಅವರನ್ನು ಅಮಾನತು ಮಾಡಿದ್ದ ಸರ್ಕಾರದ ಆದೇಶಕ್ಕೆ ಕೆಎಸ್‌ಎಟಿ (Karnataka State Administrative Tribunal) ತಡೆ ನೀಡಿದೆ.
ಲಿಂಗಸುಗೂರು ತಾಲ್ಲೂಕಿನ ರೋಡಲಬಂಡಾ ಗ್ರಾಮದ ಪಿಡಿಒ ಪ್ರವೀಣ್ ಕುಮಾರ್ ಅವರನ್ನು ಅಮಾನತು ಮಾಡಿ ಸರ್ಕಾರ ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ರಾಜಕೀಯ ಒತ್ತಡದಿಂದಾಗಿ ಪಂಚಾಯ,ತ್ ಅಭಿವೃದ್ಧಿ ಅಧಿಕಾರಿ ಪ್ರವೀಣ್ ಕುಮಾರ್ ಅವರನ್ನು ಏಕಪಕ್ಷೀಯವಾಗಿ ಅಮಾನತು ಮಾಡಲಾಗಿದೆ ಎಂದು ಆರೋಪಿಸಿ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರ ಕಚೇರಿಯ ಕಾನೂನು ತಂಡವು ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿ ಮೊರೆ ಹೋಗಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮಂಡಳಿಯು ಇದೀಗ ರಾಜ್ಯ ಸರ್ಕಾರದ ಅಮಾನತು ಆದೇಶಕ್ಕೆ ತಡೆಯಾಜ್ಞೆ ನೀಡಿದೆ.
ಹಿನ್ನೆಲೆ | ಇದೇ ಅ.12 ರಂದು ಲಿಂಗಸುಗೂರು ಪಟ್ಟಣದಲ್ಲಿ ಆರ್‌ಎಸ್‌ಎಸ್ ಶತಮಾನೋತ್ಸವದ ಹಿನ್ನೆಲೆ ಪಂಥಸAಚಲನ ಕಾರ್ಯಕ್ರಮ ನಡೆದಿತ್ತು. ಈ ಪಥಸಂಚಲನದಲ್ಲಿ ಕೈಯಲ್ಲಿ ದೊಣ್ಣೆ ಹಿಡಿದುಕೊಂಡು ಗಣವೇಷ ಧರಿಸಿ ಪ್ರವೀಣ್ ಭಾಗವಹಿಸಿದ್ದರು. ಆ ಬಳಿಕ ಕರ್ನಾಟಕ ಸಿವಿಲ್ ಸೇವಾ ನಿಯಮಗಳ ಉಲ್ಲಂಘನೆ ಹಾಗೂ ಸರ್ಕಾರಿ ನೌಕರನ ತರವಲ್ಲದ ರೀತಿ ನಡೆದುಕೊಂಡಿದ್ದಕ್ಕೆ ಅಮಾನತು ಮಾಡಿ, ಪಂಚಾಯತ್ ರಾಜ್ ಇಲಾಖೆ ಆಯುಕ್ತೆ ಡಾ.ಅರುಂಧತಿ ಅವರು ಆದೇಶಿಸಿದ್ದರು.
ಇದನ್ನೂ ಓದಿ : ಮಂಡ್ಯ | ಮನೆಯ ಮುಂದೆ ಗಾಂಜಾ ಗಿಡ ಬೆಳೆದಿದ್ದ ವ್ಯಕ್ತಿ ಬಂಧನ!



















