ಶಿವಮೊಗ್ಗ : ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ವಾಹನವೊಂದು ಮರಕ್ಕೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ. ಈ ಘಟನೆ ಜಿಲ್ಲೆಯ ಹೊನ್ನಾಳಿ ರಸ್ತೆಯ ತಾವರೆ ಚಟ್ನಳ್ಳಿ ಹಾಗೂ ಗೊಂದಿ ಚಟ್ನಳ್ಳಿ ಗ್ರಾಮದ ರಸ್ತೆ ಮಾರ್ಗದಲ್ಲಿ ನಡೆದಿದೆ.
ಗೂಡ್ಸ್ ವಾಹನ ಚಾಲಕ ನಿದ್ದೆ ಮಂಪರಿನಲ್ಲಿ ರಸ್ತೆ ಬದಿಯ ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಗೂಡ್ಸ್ ವಾಹನದಲ್ಲಿದ್ದ ಸಾದೀಕ್(40), ಫಿರೋಜ್(30) ಮತ್ತು ಅಸಾದುಲ್ಲಾ(25) ಎಂಬವರು ಮೃತಪಟ್ಟಿದ್ದಾರೆ. ಚಾಲಕನಿಗೆ ಗಂಭೀರ ಗಾಯಗಳಾಗಿವೆ.
ವಾಹನದಲ್ಲಿದ್ದ ಸಾದೀಕ್ ಹಾಗೂ ಫಿರೋಜ್ ಉತ್ತರ ಪ್ರದೇಶದವರಾಗಿದ್ದರೆ, ಅಸಾದುಲ್ಲಾ ಚನ್ನಗಿರಿಯ ನಿವಾಸಿ. ಚಾಲಕ ಇರ್ಫಾನ್ ಗಾಯಗೊಂಡಿದ್ದು, ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶಿವಮೊಗ್ಗ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಶವಗಳನ್ನು ಶವಗಾರಕ್ಕೆ ರವಾನಿಸಿ ಪ್ರಕರಣ ದಾಖಲಿಸಿದ್ದಾರೆ.
ಇದನ್ನೂ ಓದಿ : ಮೈಸೂರು | ಗಂಡನನ್ನೇ ಕೊಲ್ಲಲು ಸ್ಕೆಚ್ ಹಾಕಿದ್ದ ಖತರ್ನಾಕ್ ಪತ್ನಿ : ಸಿಕ್ಕಿಬಿದ್ದಿದ್ದೇ ರೋಚಕ..!



















