ಬೆಂಗಳೂರು: ಪದವಿ, ಡಿಪ್ಲೋಮಾ, ಸ್ನಾತಕೋತ್ತರ ಪದವಿ ಮುಗಿಸಿ ಕೇಂದ್ರ ಸರ್ಕಾರದ ಉದ್ಯೋಗಗಳನ್ನು ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ ದೊರೆತಿದೆ. ಕೇಂದ್ರ ಸರ್ಕಾರಿ ಒಡೆತನದ ಬ್ರಾಡ್ ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟಂಟ್ಸ್ ಇಂಡಿಯಾ ಲಿಮಿಟೆಡ್ ಸಂಸ್ಥೆಯಲ್ಲಿ ಖಾಲಿ ಇರುವ 3 ಹುದ್ದೆಗಳ ನೇಮಕಾತಿಗಾಗಿ (BECIL Recruitment 2025) ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಬ್ರಾಡ್ ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟಂಟ್ಸ್ ಇಂಡಿಯಾ ಲಿಮಿಟೆಡ್
ಒಟ್ಟು ಹುದ್ದೆಗಳು: 03
ಉದ್ಯೋಗ ಸ್ಥಳ: ನವದೆಹಲಿ
ಅರ್ಜಿ ಸಲ್ಲಿಸಲು ಕೊನೆಯ ದಿನ: ನವೆಂಬರ್ 05
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಒಂದು ಕಂಟೆಂಟ್ ರೈಟರ್, ಒಂದು ಗ್ರಾಫಿಕ್ ಡಿಸೈನರ್ ಹಾಗೂ ಒಂದು ವೀಡಿಯೋ ಎಡಿಟರ್ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ದೇಶದ ಯಾವುದೇ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಪದವಿ, ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೋಮಾ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. 18ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ನೇಮಕಾತಿ ಹೊಂದಿದವರಿಗೆ ಮಾಸಿಕ 65 ಸಾವಿರ ರೂಪಾಯಿಯಿಂದ 70 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಎಸ್ಸಿ, ಎಸ್ಟಿ ಹಾಗೂ ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ. ಉಳಿದವರಿಗೆ 295 ರೂಪಾಯಿ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಕೌಶಲ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲಿಗೆ becil.com ವೆಬ್ ಸೈಟ್ ಗೆ ಭೇಟಿ ನೀಡಬೇಕು
- ನಿಮಗೆ ಬೇಕಾದ ಹುದ್ದೆ ಆಯ್ಕೆ ಮಾಡಿಕೊಳ್ಳಬೇಕು
- ಅರ್ಜಿ ಸಲ್ಲಿಕೆ ಕುರಿತ ಅಧಿಸೂಚನೆ ಓದಿಕೊಳ್ಳಬೇಕು
- ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು
- ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಬೇಕು
- ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿಯನ್ನು ಡೌನ್ ಲೋಡ್ ಮಾಡಿಟ್ಟುಕೊಂಡಿರಬೇಕು
ಇದನ್ನೂ ಓದಿ : ವಿದ್ಯಾರ್ಥಿಗಳಿಗೆ ವರ್ಷಕ್ಕೆ 75 ಸಾವಿರ ರೂ. ಸ್ಕಾಲರ್ ಶಿಪ್: ಹೀಗೆ ಅರ್ಜಿ ಸಲ್ಲಿಸಿ



















