ಶಿವಮೊಗ್ಗ: ಕೌಟುಂಬಿಕ ಕಲಹದಿಂದ ಬೇಸತ್ತು ವಿಷ ಸೇವಿಸಿ ಸಾವನ್ನಪ್ಪಿದ್ದ ಮಹಿಳೆಯ ಶವವನ್ನು ಆಸ್ಪತ್ರೆಯಲ್ಲಿಯೇ ಬಿಟ್ಟು ಆಕೆಯ ಪತಿ ಹಾಗೂ ಆತನ ಕುಟುಂಬಸ್ಥರು ಪರಾರಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಮೂಲದ ಪೂಜಾ ಮೃತ ಮಹಿಳೆ. ಮೂರು ವರ್ಷದ ಹಿಂದೆ ಎನ್.ಆರ್.ಪುರ ತಾಲೂಕಿನ ಮಾವಿನಕೆರೆ ಶೆಟ್ಟಿಕೊಪ್ಪದ ಶರತ್ ಜೊತೆ ಪೂಜಾಳನ್ನು ಮದುವೆ ಮಾಡಲಾಗಿತ್ತು. ದಂಪತಿಗೆ ಎರಡು ವರ್ಷದ ಪುತ್ರನಿದ್ದಾನೆ ಎಂದು ತಿಳಿದು ಬಂದಿದೆ.
ಪತಿ ಶರತ್ ತಂದೆ, ತಾಯಿ ಹಾಗೂ ಶರತ್‌ನ ಸಹೋದರಿ ಸೇರಿಕೊಂಡು ಪೂಜಾಳಿಗೆ ಕಿರುಕುಳ ನೀಡುತ್ತಿದ್ದರು ಎಂದು ಆತೋಪಿಸಲಾಗಿದ್ದು, ಇದರಿಂದ ಬೇಸತ್ತ ಪೂಜಾ ತಾಯಿ ಮನೆಗೆ ಬಂದು ತನ್ನ ಸಂಕಷ್ಟವನ್ನು ಹೇಳಿಕೊಂಡಿದ್ದಳು. ಬಳಿಕ ತಂದೆ ತಾಯಿ ಸಮಾಧಾನ ಮಾಡಿ ಮತ್ತೆ ಗಂಡನ ಮನೆಗೆ ಕಳಿಸಿದ್ದರು.
ಮತ್ತೆ ಅತ್ತೆ ಮಾವ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ಪೂಜಾ ಕಳೆನಾಶಕ ಸೇವಿಸಿದ್ದಳು. ಆಕೆಯನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಸಾವನ್ನಪ್ಪಿದ್ದಾಲೆ. ಇದರಿಂದ ಪತಿಯ ಕುಟುಂಬದವರು ಹೆದರಿ ಶವವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.



















