ಚಿಕ್ಕಮಗಳೂರು: ಕಾಡಾನೆ ದಾಳಿಗೆ ಇಬ್ಬರು ರೈತರು ಬಲಿಯಾದ ಘಟನೆ ಶೃಂಗೇರಿ ತಾಲೂಕಿನ ಕೆರೆಮನೆ ಗ್ರಾಮದಲ್ಲಿ ನಡೆದಿದೆ.
ಹರೀಶ್ (44) ಮತ್ತು ಉಮೇಶ್ (40) ಎಂಬುವವರು ಸಾವಿಗೀಡಾದ ರೈತರು. ಇಬ್ಬರು ಸೇರಿ ಕೊಟ್ಟಿಗೆಗೆ ಸೊಪ್ಪು ತರಲು ಕಾಡಿಗೆ ಹೋಗಿದ್ದರು. ಈ ವೇಳೆ ಆನೆ ದಾಳಿ ನಡೆಸಿದ ಪರಿಣಾಮ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಶೃಂಗೇರಿಯ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಶೃಂಗೇರಿ ಪೊಲೀಸರು, ಅರಣ್ಯ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಗ್ರಾಮಸ್ಥರು, ಕಾಡಾನೆ ಹಾವಳಿಯಿಂದ ಶಾಶ್ವತ ಪರಿಹಾರ ಒದಗಿಸುವಂತೆ ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಕೌಟುಂಬಿಕ ಕಲಹ| ವಿಷ ಸೇವಿಸಿ ಸಾವನ್ನಪ್ಪಿದ ಮಹಿಳೆ ; ಆಸ್ಪತ್ರೆಯಲ್ಲಿಯೇ ಶವ ಬಿಟ್ಟು ಪರಾರಿಯಾದ ಕುಟುಂಬಸ್ಥರು



















