ಮೆಲ್ಬರ್ನ್ : ಅಭಿಷೇಕ್ ಶರ್ಮಾ ಏಕಾಂಗಿ ಹೋರಾಟದ ಹೊರತಾಗಿಯೂ ಅಗ್ರ ಕ್ರಮಾಂಕದ ಬ್ಯಾಟರ್‌ಗಳ ವೈಫಲ್ಯದಿಂದ ಆಸ್ಟ್ರೇಲಿಯಾ ವಿರುದ್ಧ ನಡೆದ 2ನೇ ಟಿ20 ಪಂದ್ಯದಲ್ಲಿ ಭಾರತ ಸೋಲನುಭವಿಸಿದೆ.
ಮೆಲ್ಬರ್ನ್ ಕ್ರಿಕೆಟ್ ಅಂಗಳದಲ್ಲಿಂದು ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಫೀಲ್ಡಿಂಗ್ ಆಯ್ದುಕೊಂಡು ಬ್ಯಾಟಿಂಗ್ ಮಾಡುವ ಅವಕಾಶವನ್ನ ಭಾರತ ತಂಡಕ್ಕೆ ಬಿಟ್ಟುಕೊಟ್ಟಿತು.
ಮೊದಲು ಬ್ಯಾಟ್ ಮಾಡಿದ ಭಾರತ 18.4 ಓವರ್‌ಗಳಲ್ಲೇ 125 ರನ್‌ಗಳಿಗೆ ಆಲೌಟ್ ಆಯಿತು. ಅಲ್ಪ ಮೊತ್ತದ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ 13.2 ಓವರ್‌ಗಳಲ್ಲೇ 126 ರನ್ ಗಳಿಸಿ ಗೆಲುವು ಸಾಧಿಸಿತು. ಈ ಮೂಲಕ 5 ಪಂದ್ಯಗಳ ಟಿ20 ಸರಣಿಯನ್ನ 1-0 ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಇದನ್ನೂ ಓದಿ : ದೇಶದ ಕಾನೂನು ಸುವ್ಯವಸ್ಥೆ ಹಾಳು ಮಾಡುತ್ತಿರುವ RSSನ್ನು ನಿಷೇಧಿಸಬೇಕು | ಮಲ್ಲಿಕಾರ್ಜುನ ಖರ್ಗೆ



















