ಹೈದರಾಬಾದ್: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಅವರು ಇಂದು ತೆಲಂಗಾಣ ಸರ್ಕಾರದ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಜಿಷ್ಣುದೇವ್ ವರ್ಮಾ ಅವರು ರಾಜಭವನದಲ್ಲಿ ಪ್ರಮಾಣವಚನ ಬೋಧಿಸಿದರು.
ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ತೆಲಂಗಾಣ ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿ ಮತ್ತು ಸಚಿವರು ಭಾಗವಹಿಸಿದ್ದರು.
ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿಯವರ ಸಚಿವ ಸಂಪುಟಕ್ಕೆ ಹೊಸ ಸದಸ್ಯನ ಸೇರ್ಪಡೆಯಾಗಿದೆ. ಭಾರತ ತಂಡದ ಮಾಜಿ ಕ್ರಿಕೆಟರ್ ಮೊಹಮ್ಮದ್ ಅಜರುದ್ದೀನ್ ಅವರಿಗೆ ಸಚಿವ ಸ್ಥಾನ ಒಲಿದು ಬಂದಿದ್ದು, 16ನೇ ಸದಸ್ಯನಾಗಿ ರೇವಂತ್ ರೆಡ್ಡಿಯವರ ಸಚಿವ ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ.
ವಿಚಿತ್ರ ಎಂದರೆ ಅವರಿನ್ನೂ ಚುನಾವಣೆಗೆ ಸ್ಪರ್ಧಿಸಿಲ್ಲ, ಶಾಸಕನೂ ಆಗಿಲ್ಲ, ಆದರೂ ಈಗ ತೆಲಂಗಾಣದ ಕಾಂಗ್ರೆಸ್ ಸರ್ಕಾರ ಅವರನ್ನು ಸಚಿವನನ್ನಾಗಿ ಆಯ್ಕೆ ಮಾಡಿದ್ದಾರೆ. ತೆಲಂಗಾಣ ಕಾಂಗ್ರೆಸ್‌ನ ಕಾರ್ಯಾಧ್ಯಕ್ಷ ಆಗಿರುವ ಕ್ರಿಕೆಟರ್ ಮೊಹಮ್ಮದ್ ಅಜರುದ್ದೀನ್ ಅವರು ತೆಲಂಗಾಣದ ಸಚಿವರಾಗಿ ಇಂದು ಪ್ರಮಾಣವಚನ ಸ್ವೀಕರಿಸಿದ್ದು, ಹೀಗಾಗಿ ರೇವಂತ್ ರೆಡ್ಡಿ ಸಂಪುಟದಲ್ಲಿ ಸಚಿವರ ಸಂಖ್ಯೆ 16ಕ್ಕೆ ಏರಿದೆ.
ಇದನ್ನೂ ಓದಿ : ಮೈಸೂರಿನಲ್ಲಿ ಹುಲಿ ದಾಳಿಗೆ ಮತ್ತೋರ್ವ ಬಲಿ!



















