ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಮ್‌ಆರ್‌ಸಿಎಲ್ ಸಿಹಿ ಸುದ್ದಿಯೊಂದನ್ನು ನೀಡಿದೆ. ನ.1ರ ಇಂದಿನಿಂದ ಹೆಚ್ಚುವರಿಯಾಗಿ ಐದು ರೈಲುಗಳು ವಾಣಿಜ್ಯ ಸಂಚಾರ ಆರಂಭಿಸಲಿವೆ. ಹೀಗಾಗಿ ಪ್ರತಿ 15 ನಿಮಿಷಕ್ಕೊಂದು ರೈಲುಗಳು ಸಂಚರಿಸಲಿವೆ ಎಂದು ಬಿಎಮ್‌ಆರ್‌ಸಿಎಲ್ ತಿಳಿಸಿದೆ.
ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕರ್ನಾಟಕ ರಾಜ್ಯೋತ್ಸವದ 70 ನೇ ವರ್ಷದ ಆಚರಣೆಯ ಸಂದರ್ಭದಲ್ಲಿ, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ದಿನಾಂಕ 1ನೇ ನವೆಂಬರ್ 2025ರಿಂದ ಹಳದಿ ಮಾರ್ಗದಲ್ಲಿಐದನೇ ಮೆಟ್ರೋ ರೈಲನ್ನು ವಾಣಿಜ್ಯ ಸೇವೆಗೆ ಒಳಪಡಿಸುತ್ತಿದೆ ಎಂದು ತಿಳಿಸಲಾಗಿದೆ.
ಈ ಹೊಸ ರೈಲಿನ ಸೇರ್ಪಡೆಯೊಂದಿಗೆ, ಹಳದಿ ಮಾರ್ಗದಲ್ಲಿ ಪೀಕ್ ಅವರ್‌ನಲ್ಲಿ ರೈಲುಗಳ ಆವರ್ತನವು 19 ನಿಮಿಷಗಳಿಗೆ ಬದಲಾಗಿ ಪ್ರತಿ 15 ನಿಮಿಷಕ್ಕೆ ರೈಲುಗಳು ಚಲಿಸಲಿವೆ ಎಂದು ತಿಳಿಸಿದೆ. ಇದರಿಂದಾಗಿ ಪ್ರಯಾಣಿಕರಿಗೆ ಕಡಿಮೆ ಅವಧಿಯಲ್ಲಿ ಸುಗಮ ಮತ್ತು ನಿರಂತರ ಸೇವೆ ನೀಡಲು ಸಹಾಯಕವಾಗಲಿದೆ. ಈ ಬದಲಾವಣೆಯು ಎಲ್ಲ ದಿನಗಳಿಗೆ ಅನ್ವಯವಾಗುತ್ತದೆ’ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ಹೇಳಿಕೆ ನೀಡಿದೆ.
ಸದ್ಯ 4 ರೈಲುಗಳು ಸಂಚಾರ ನಡೆಸುತ್ತಿದ್ದು, 19 ನಿಮಿಷ ಅಂತರದಲ್ಲಿ ರೈಲು ಸೇವೆ ಲಭ್ಯವಿತ್ತು. ಈ ಹೊಸ ರೈಲಿನ ಚಾಲನೆಯಿಂದ, ಹಳದಿ ಮಾರ್ಗದಲ್ಲಿ ಪ್ರಯಾಣ ಅನುಕೂಲಕರವಾಗಲಿದೆ. ಆರ್‌ವಿ ರಸ್ತೆ ಮತ್ತು ಬೊಮ್ಮಸಂದ್ರ ಟರ್ಮಿನಲ್‌ಗಳಿಂದ ಹೊರಡುವ ಮೊದಲ ಮತ್ತು ಕೊನೆಯ ರೈಲುಗಳ ಸಮಯಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಪ್ರಯಾಣಿಕರು ಈ ಸುಧಾರಿತ ಮೆಟ್ರೋ ಸೇವೆಗಳ ಸದುಪಯೋಗ ಪಡೆಯುವಂತೆ ಎಂದು ನಿಗಮ ಸೂಚಿಸಿದೆ.
ಇದನ್ನೂ ಓದಿ: ಸರ್ಕಾರಿ ಕಚೇರಿ, ಸಭೆ-ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲಿ ಬಳಸುವಂತಿಲ್ಲ; ಸಿಎಂ ಕಟ್ಟುನಿಟ್ಟಿನ ಸೂಚನೆ



















