ಕರುನಾಡಿನೆಲ್ಲೆಡೆ 70ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಕಾಂತಾರ ಹೀರೋ ರಿಷಬ್ ಶೆಟ್ಟಿ, ಕೆಜಿಎಫ್ ಸ್ಟಾರ್ ಯಶ್ ಸೇರಿದಂತೆ ಚಂದನವನದ ತಾರೆಯರು ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ.
ರಾಷ್ಟ್ರಕವಿ ಕುವೆಂಪು ಅವರ ಕವನದ ಸಾಲುಗಳನ್ನು ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳುವ ಮೂಲಕ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ. ‘ಎಲ್ಲಾದರು ಇರು ಎಂತಾದರು ಇರು, ಎಂದೆಂದಿಗೂ ನೀ ಕನ್ನಡವಾಗಿರು.. ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು’ ಎಂದು ಪೋಸ್ಟ್ ಹಂಚಿಕೊಂಡಿದ್ದಾರೆ.
ಹಾಗೆಯೇ ‘ಎದೆ ತಟ್ಟಿ ಹೇಳು ನಾ ಭಾರತೀಯನೆಂದು, ಗರ್ವದಿಂದ ಬಾಳು ನಾ ಕನ್ನಡಿಗನೆಂದು, ಸಾವಿರ ಭಾಷೆ ನಾಲಿಗೆಯಲ್ಲಿರಲಿ, ಕನ್ನಡ ಭಾಷೆ ಹೃದಯದಲ್ಲಿರಲಿ, ಸಿರಿಗನ್ನಡಂ ಗೆಲ್ಗೆ ಸಿರಿಗನ್ನಡಂ ಬಾಳ್ಗೆ’ ಅಂತ ಎಕ್ಸ್ ಖಾತೆಯಲ್ಲಿ ನಟ ಯಶ್ ಪೋಸ್ಟ್ ಮಾಡಿ ಶುಭಾಶಯ ತಿಳಿಸಿದ್ದಾರೆ.
ಇನ್ನು, ಸ್ಯಾಂಡಲ್‌ವುಡ್‌ನ ಹಲವು ತಾರೆಯರು ಸೋಶಿಯಲ್ ಮೀಡಿಯಾದಲ್ಲಿ ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದ್ದು, ಕನ್ನಡಾಂಬೆಗೆ ನುಡಿನಮನಗಳನ್ನು ಸಲ್ಲಿಸಿದ್ದಾರೆ. ನಟಿ ರಾಧಿಕಾ ಪಂಡಿತ್, ಮೋಹಕ ತಾರೆ ರಮ್ಯಾ, ಡಾ. ಶಿವರಾಜ್ ಕುಮಾರ್, ಡಾಲಿ ಧನಂಜಯ ಸೇರಿ ಇನ್ನು ಹಲವು ನಟ ನಟಿಯರು ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ.



ಇದನ್ನೂ ಓದಿ : ಕನ್ನಡವನ್ನು ಹೊಸ ತಂತ್ರಜ್ಞಾನದ ಭಾಷೆಯನ್ನಾಗಿಸಲು ವಿದ್ವಾಂಸರು, ತಾಂತ್ರಿಕ ತಜ್ಞರು ಮುಂದಾಗಿ | ಸಿಎಂ ಸಿದ್ದರಾಮಯ್ಯ ಕರೆ!



















