ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ಭಾರತೀಯ ಷೇರುಪೇಟೆ ನಿಯಂತ್ರಕ ಸಂಸ್ಥೆಯಾದ ಸೆಬಿಯಲ್ಲಿ (SEBI Recruitment 2025) ಖಾಲಿ ಇರುವ 110 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆಫೀಸರ್ ಗ್ರೇಡ್ ಎ (ಅಸಿಸ್ಟಂಟ್ ಮ್ಯಾನೇಜರ್) ಹುದ್ದೆಗಳ ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಇದಕ್ಕೂ ಮೊದಲು ಅರ್ಜಿ ಸಲ್ಲಿಕೆಗೆ ಅಕ್ಟೋಬರ್ 30 ಕೊನೆಯ ದಿನವಾಗಿತ್ತು. ಈಗ ಈ ಗಡುವನ್ನು ನವೆಂಬರ್ 28ಕ್ಕೆ ವಿಸ್ತರಿಸಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ಷೇರುಪೇಟೆ ನಿಯಂತ್ರಕ ಸಂಸ್ಥೆ ಸೆಬಿ
ಹುದ್ದೆ ಹೆಸರು: ಆಫೀಸರ್ ಗ್ರೇಡ್ ಎ (ಅಸಿಸ್ಟಂಟ್ ಮ್ಯಾನೇಜರ್)
ಒಟ್ಟು ಹುದ್ದೆ: 110
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ 28
ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಎಲ್ ಎಲ್ ಬಿ, ಬಿ.ಇ ಹಾಗೂ ಬಿ.ಟೆಕ್ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 62,500 ರೂಪಾಯಿಯಿಂದ 1.26 ಲಕ್ಷ ರೂಪಾಯಿವರೆಗೆ ವೇತನ ನೀಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವ ಎಸ್ಸಿ, ಎಸ್ಟಿ ಹಾಗೂ ಬಿಡಬ್ಲ್ಯೂಬಿಡಿ (ವಿಶೇಷ ಚೇತನರು) ಅಭ್ಯರ್ಥಿಗಳಿಗೆ 100 ರೂಪಾಯಿ ಶುಲ್ಕವಿದೆ. ಇಡಬ್ಲ್ಯೂಎಸ್, ಒಬಿಸಿ ಅಭ್ಯರ್ಥಿಗಳಿಗೆ 1 ಸಾವಿರ ರೂ. ನಿಗದಿಪಡಿಸಲಾಗಿದೆ. ಆನ್ ಲೈನ್ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು https://www.sebi.gov.in/ ಗೆ ಭೇಟಿ ನೀಡುವ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ಹೃದಯಾಘಾತ, ಪಾರ್ಶ್ವವಾಯು ತಡೆಗಟ್ಟಲು ಮಾತ್ರೆ ರೂಪದ ಮೊದಲ GLP-1 ಔಷಧಿಗೆ ಎಫ್‌ಡಿಎ ಅನುಮೋದನೆ


















