ಹೋಬಾರ್ಟ್ : ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯ ಮೂರನೇ ಪಂದ್ಯದಲ್ಲಿ ಭಾರತ 5 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.
ಆಸ್ಟ್ರೇಲಿಯಾದ ಹೋಬಾರ್ಟ್ ನ ಬೆಲ್ಲೆರಿವ್ ಓವಲ್ ಕ್ರೀಡಾಂಗಣದಲ್ಲಿ ನಡೆದ 3ನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ನೀಡಿದ 187 ರನ್ ಗಳ ಗುರಿಯನ್ನು ಬೆನ್ನತ್ತಿದ ಭಾರತ, 5 ವಿಕೆಟ್ ಕಳೆದುಕೊಂಡು ಯಶಸ್ವಿಯಾಗಿ ಗುರಿ ಮುಟ್ಟಿದೆ. ಇದರೊಂದಿಗೆ 5 ಪಂದ್ಯಗಳ ಟಿ20 ಸರಣಿ 1-1ರಲ್ಲಿ ಸಮಬಲ ಸಾಧಿಸಿದೆ.
ವಾಸ್ತವವಾಗಿ ಉಭಯ ತಂಡಗಳ ನಡುವಿನ ಮೊದಲ ಪಂದ್ಯ ಮಳೆಯಿಂದ ರದ್ದಾಗಿತ್ತು. ಆ ಬಳಿಕ ಮೆಲ್ಬೋರ್ನ್ನಲ್ಲಿ ನಡೆದ ಎರಡನೇ ಟಿ20 ಪಂದ್ಯವನ್ನು ಆತಿಥೇಯ ಆಸ್ಟ್ರೇಲಿಯಾ ಗೆದ್ದುಕೊಂಡಿತ್ತು. ಇದೀಗ ಇಂದು ನಡೆದ ಮೂರನೇ ಟಿ20 ಪಂದ್ಯವನ್ನು ಗೆದ್ದುಕೊಳ್ಳುವ ಮೂಲಕ ಸೂರ್ಯಕುಮಾರ್ ಪಡೆ ಟಿ20 ಸರಣಿಯಲ್ಲಿ ತನ್ನ ಗೆಲುವಿನ ಖಾತೆ ತೆರೆದಿದೆ.
ಭಾರತದ ಪರ ಅಭಿಷೇಕ್ ಶರ್ಮಾ 25, ಶುಭ್ ಮನ್ ಗಿಲ್ 15, ಸೂರ್ಯ ಕುಮಾರ್ ಯಾದವ್ 24, ತಿಲಕ್ ವರ್ಮಾ 29, ಅಕ್ಸರ್ ಪಟೇಲ್ 17 ರನ್ ಗಳಿಸಿದರು. ವಾಷಿಂಗ್ಟನ್ ಸುಂದರ್ (49) ಮತ್ತು ಜಿತೇಶ್ ಶರ್ಮಾ (22)ರನ್ ಗಳಿಸಿ ಗೆಲುವಿನ ದಡ ಸೇರಿಸಿದರು.
ಇದನ್ನೂ ಓದಿ : ವಿದ್ಯುತ್ ತಂತಿ ಸ್ಪರ್ಶಿಸಿ ಎರಡು ಕಾಡಾನೆಗಳ ದಾರುಣ ಸಾವು



















