ಬೆಂಗಳೂರು: ನಮ್ಮ ಮೆಟ್ರೋ ಪಿಂಕ್ ಲೈನ್ 2026ರ ಮೇನಲ್ಲಿ ಕಾರ್ಯಾರಂಭ ಮಾಡಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಇಂದು ಸೋಮವಾರ ಘೋಷಿಸಿದ್ದಾರೆ.
‘ಉತ್ತಮ ಸಂಪರ್ಕಕ್ಕೆ ನಮ್ಮ ಬದ್ಧತೆ ಮುಂದುವರಿಯುತ್ತದೆ! ಕಾಳೇನ ಅಗ್ರಹಾರದಿಂದ ನಾಗವಾರಕ್ಕೆ ಸಂಪರ್ಕ ಕಲ್ಪಿಸುವ ಮೆಟ್ರೋ ಗುಲಾಬಿ ಮಾರ್ಗದ ಸಂಚಾರ ಮುಂದಿನ ವರ್ಷ ಮೇ ತಿಂಗಳಲ್ಲಿ ಆರಂಭವಾಗಲಿದೆ. ಈ ಮಾರ್ಗವು 13.76 ಕಿ.ಮೀ. ಭೂಗತ ಮಾರ್ಗವನ್ನು ಹೊಂದಿದ್ದು, ಸಂಚಾರ ಸುಗಮವಾಗಲಿದೆ’ ಮತ್ತು ಬೆಂಗಳೂರು ದಕ್ಷಿಣದಿಂದ ಉತ್ತರಕ್ಕೆ ಸಂಪರ್ಕ ಕಲ್ಪಿಸುತ್ತದೆ’ ಎಂದು ‘ಎಕ್ಸ್’ನಲ್ಲಿ ಪೋಸ್ಟ್ ಮಾಡುವ ಮೂಲಕ ತಿಳಿಸಿದ್ದಾರೆ.



















