ಬೆಂಗಳೂರು : ನಗರದ ಬಂಡೆಪಾಳ್ಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮಾದಕ ವಸ್ತು ಮಾರಾಟ ಮಾಡ್ತಿದ್ದ ನೈಜೀರಿಯಾ ಮೂಲದ ಆರೋಪಿಯನ್ನು ಬಂಧಿಸಿದ್ದಾರೆ. ಚಿಬುಜೋ ಗಾಡ್ವಿನ್ ಬಂಧಿತ ಆರೋಪಿ.

ಬಂಧಿತನಿಂದ 75 ಲಕ್ಷ ರೂ. ಮೌಲ್ಯದ 700 ಗ್ರಾಂ MDMA, 8 ಗ್ರಾಂ ಕೊಕೇನ್ ವಶಕ್ಕೆ ಪಡೆಯಲಾಗಿದೆ. ಬಂಧಿತ ಆರೋಪಿ ಮೆಡಿಕಲ್ ವೀಸಾ ಮೂಲಕ ಭಾರತಕ್ಕೆ ಬಂದಿದ್ದು, ನಗರದಲ್ಲಿ ಅಕ್ರಮವಾಗಿ ನೆಲೆಸಿ ಮಾದಕ ವಸ್ತುಗಳನ್ನು ಸಪ್ಲೈ ಮಾಡ್ತಿದ್ದ. ವಿಷಯ ತಿಳಿಯುತ್ತಿದ್ದಂತೆ ಬಂಡೆಪಾಳ್ಯ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿ ಚಿಬುಜೋ ಗಾಡ್ವಿನ್‌ನ್ನು ಬಂಧಿಸಿದ್ದಾರೆ. ಸದ್ಯ ಪ್ರಕರಣದ ತನಿಖೆ ಮುಂದುವರೆದಿದೆ.
ಇದನ್ನೂ ಓದಿ : 43 ವರ್ಷ ಸುಳ್ಳು ಕೇಸ್‌ನಲ್ಲಿ ಜೈಲು: ಭಾರತೀಯನ ಗಡಿಪಾರಿಗೆ ಅಮೆರಿಕ ಕೋರ್ಟ್ ತಡೆ



















