ಮಂಡ್ಯ : ಡಿಸಿ ಕಚೇರಿ ಎದುರಲ್ಲೇ ರೈತನೊರ್ವ ಮೈಮೇಲೆ ಪೆಟ್ರೋಲ್ ಸುರಿದು, ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ಕೆ.ಆರ್. ಪೇಟೆ ತಾಲೂಕು ಮೂಡನಹಳ್ಳಿ ಗ್ರಾಮದ ಮಂಜೇಗೌಡ (55) ಎಂಬವರು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಬೇಸತ್ತಿದ್ದ ಇವರು, ನಗರದ ಜಿಲ್ಲಾಧಿಕಾರಿ ಕಚೇರಿ ಎದುರಿನ ಭವ್ಯವನದಲ್ಲಿ ಮಂಗಳವಾರ ಬೆಳಗ್ಗೆ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡಿದ್ದಾರೆ. ಇದನ್ನೂ ಓದಿ : ಹಿಂದುಜಾ ಗ್ರೂಪ್ ಅಧ್ಯಕ್ಷ ಗೋಪಿಚಂದ್ ಹಿಂದುಜಾ ನಿಧನ
ಬಳಿಕ ಜನರು ನೀರು ಹಾಕಿ ಬೆಂಕಿಯನ್ನು ನಂದಿಸಿದ್ದಾರೆ. ಮೊದಲು ವಿದ್ಯುತ್ ಶಾಕ್ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಿದ ಮಂಜೇಗೌಡ ನಂತರ ತಾವೇ, ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾಗಿ ಹೇಳಿದ್ದಾರೆ. ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಅವರನ್ನು ರಕ್ಷಿಸಿ, ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.



















