ಬೆಂಗಳೂರು: ಕರ್ನಾಟಕದ ಸುರತ್ಕಲ್ ನಲ್ಲಿರುವ, ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ (NIT Karnataka Recruitment 2025) ಖಾಲಿ ಇರುವ 3 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಮೂರು ಪ್ರಾಜೆಕ್ಟ್ ಅಸಿಸ್ಟಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ (NIT)
ಹುದ್ದೆಗಳ ಹೆಸರು: ಪ್ರಾಜೆಕ್ಟ್ ಅಸಿಸ್ಟಂಟ್
ಒಟ್ಟು ಹುದ್ದೆಗಳು: 03
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ 15
ಅರ್ಜಿ ಸಲ್ಲಿಸುವ ವಿಧಾನ: ಆನ್ ಲೈನ್
ಉದ್ಯೋಗ ಸ್ಥಳ: ಸುರತ್ಕಲ್, ಕರ್ನಾಟಕ
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಸಿವಿಲ್ ಎಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ಪದವಿ ಪಡೆವಿ ಪಡೆದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಗರಿಷ್ಠ 35 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅರ್ಹರು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ nitk.ac.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡ ಬಳಿಕ, ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಬೇಕು. ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ckrishna.nitk@nitk.edu.in ಗೆ ಮೇಲ್ ಮಾಡಬೇಕು. ನೇಮಕಾತಿ ಹೊಂದಿದವರಿಗೆ ಮಾಸಿಕ 27 ಸಾವಿರ ರೂ. ಸಂಬಳ ನೀಡಲಾಗುತ್ತದೆ.
ಇದನ್ನೂ ಓದಿ : ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ.. 31 ಡಿವೈಎಸ್‌ಪಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ



















