ಶಿವಮೊಗ್ಗ: ಕರ್ತವ್ಯ ನಿರತ ಕೆಎಸ್ಆರ್‌ಟಿಸಿ ನೌಕರನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯಸಾಗರದಲ್ಲಿ ನಡೆದಿದೆ.
ಸಂದೀಪ್ (41) ಹೃದಯಘಾತಕ್ಕೆ ಸಾವನ್ನಪ್ಪಿದ್ದ ಕೆಎಸ್ಆರ್‌ಟಿಸಿ ಡಿಪೋದ ಭದ್ರತಾ ಸಿಬ್ಬಂದಿ. ಸಾಗರದ ಮಾರಿಕಾಂಬ ದೇವಸ್ಥಾನದ ಹಿಂಭಾಗ ರಸ್ತೆಯ ನಿವಾಸಿಯಾದ ಸಂದೀಪ್‌ಗೆಕರ್ತವ್ಯ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಎದೆ ನೋವು ಕಾಣಿಸಿಕೊಂಡಿದೆ.ತಕ್ಷಣ ಅಲ್ಲೇ ಇದ್ದ ಸಹೋದ್ಯೋಗಿಗಳು ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಆದರೆ ಚಿಕಿತ್ಸೆ ಫಲಕರಿಯಾಗದೆ ಸಂದೀಪ್ ಮೃತಪಟ್ಟಿದ್ದಾರೆ.
ಇದನ್ನೂ ಓದಿ: 5 ಜಿಲ್ಲೆಯ ಪೊಲೀಸರಿಗೆ ಬೇಕಾಗಿದ್ದ ನಟೋರಿಯಸ್ ಕಳ್ಳನ ಬಂಧನ | 22.5 ಲಕ್ಷ ಮೌಲ್ಯದ ಚಿನ್ನಾಭರಣ ವಶ



















