ಬೆಂಗಳೂರು: ಕರ್ನಾಟಕ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದಲ್ಲಿ ಖಾಲಿ ಇರುವ 44 ಹುದ್ದೆಗಳ ನೇಮಕಾತಿಗಾಗಿ (KSSIDC Recruitment 2025) ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವ್ಯವಸ್ಥಾಪಕ, ಸಹಾಯಕ ವ್ಯವಸ್ಥಾಪಕ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳಿಗೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ
ಹುದ್ದೆಗಳ ಹೆಸರು: ವ್ಯವಸ್ಥಾಪಕ, ಸಹಾಯಕ ವ್ಯವಸ್ಥಾಪಕ ಇತ್ಯಾದಿ
ಒಟ್ಟು ಹುದ್ದೆಗಳು: 44
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ 14
ಅರ್ಜಿ ಸಲ್ಲಿಸುವ ವಿಧಾನ: ಆನ್ ಲೈನ್
ಕಲ್ಯಾಣ ಕರ್ನಾಟಕ ವೃಂದದ 11 ಹುದ್ದೆ ಮತ್ತು ಉಳಿಕೆ ಮೂಲ ವೃಂದದ 33 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಸಾಮಾನ್ಯ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 750 ರೂಪಾಯಿ ಅರ್ಜಿ ಶುಲ್ಕವಿದೆ. ಎಸ್ಸಿ, ಎಸ್ಟಿ, ಪ್ರವರ್ಗ 1, ಮಾಜಿ ಸೈನಿಕರು, ತೃತೀಯ ಗ ಅಭ್ಯರ್ಥಿಗಳಿಗೆ 500 ರೂಪಾಯಿ ಇದ್ದರೆ, ವಿಶೇಷ ಚೇತನರಿಗೆ 250 ರೂಪಾಯಿ ನಿಗದಿಪಡಿಸಲಾಗಿದೆ. ಸಿವಿಲ್ ಹಾಗೂ ಎಲೆಕ್ಟ್ರಿಕಲ್ ನಲ್ಲಿ ಬಿ.ಇ, ಬಿ.ಟೆಕ್, ಡಿಗ್ರಿ ಹಾಗೂ ಮಾಸ್ಟರ್ ಡಿಗ್ರಿ ಕೋರ್ಸ್ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
18ರಿಂದ 33 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು. ಲಿಖಿತ ಪರೀಕ್ಷೆ, ದಾಖಲೆ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳ ಅನ್ವಯ ಮಾಸಿಕ 97 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು https://cetonline.karnataka.gov.in/KEA/vdptrechk2025 ವೆಬ್ ಸೈಟ್ ಗೆ ಭೇಟಿ ನೀಡಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ : ಬೆಂಗಳೂರು | ವೃದ್ಧೆಯನ್ನು ಕೊಲೆ ಮಾಡಿ, ಚಿನ್ನಾಭರಣ ದೋಚಿದ್ದ ದಂಪತಿಯ ಬಂಧನ



















