ಬೆಂಗಳೂರು : ರಾಜ್ಯದಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಹೋರಾಟ ತೀವ್ರಗೊಂಡಿದ್ದು, ರೈತರ ಪ್ರತಿಭಟನೆ ಇಂದು 9ನೇ ದಿನಕ್ಕೆ ಕಾಲಿಟ್ಟಿದೆ. ಬೆಳಗಾವಿಯಲ್ಲಿ ಪ್ರತಿಭಟನೆ ತೀವ್ರ ಸ್ವರೂಪವನ್ನು ಪಡೆದುಕೊಂಡಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲೇ ಪೊಲೀಸರ ಮೇಲೆ ಕಲ್ಲು ತೂರಾಟ ನಡೆದಿದೆ. ಈ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುವಂತಾಗಿದೆ. ಪ್ರತಿಭಟನಾಕಾರರ ಮೇಲೆ ಲಘು ಲಾಠಿ ಪ್ರಹಾರ ನಡೆಲಾಗಿದೆ ಎಂದು ತಿಳಿದುಬಂದಿದೆ.
ಸಿಎಂ ತುಮಕೂರು ಪ್ರವಾಸ ರದ್ದು
ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆಗೆ ಸಿಎಂ ಸಿದ್ದರಾಮಯ್ಯ ನಡೆಸಿದ ಮೊದಲ ಸುತ್ತಿನ ಸಭೆ ಅಪೂರ್ಣವಾಗಿದೆ. ಸರ್ಕಾರದ ಮನವಿಗೆ ಕಾರ್ಖಾನೆ ಮಾಲೀಕರು ಸ್ಪಂದಿಸಿಲ್ಲ. ಬದಲಾಗಿ ತಮ್ಮದೇ ಸಂಕ ಕಷ್ಟವನ್ನು ತೋಡಿಕೊಂಡಿದ್ದಾರೆ. ಸಭೆ ಅಪೂರ್ಣವಾದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ತುಮಕೂರು ಪ್ರವಾಸ ರದ್ದಾಗಿದೆ.
ಸಿಎಂ ಕಚೇರಿ ಈ ಬಗ್ಗೆ ಅಧಿಕೃತ ಮಾಹಿತಿ ನೀಡಿದೆ. ತುಮಕೂರಿನಲ್ಲಿ ಶಂಕುಸ್ಥಾಪನೆ ಕಾರ್ಯಕ್ರಮ ಇತ್ತು. ಜೊತೆಗೆ ಮಾಜಿ ಸಚಿವ ಕೆ.ರಾಜಣ್ಣ ನಿವಾಸದಲ್ಲಿ ಔತಣಕೂಟ ಹಮ್ಮಿಕೊಳ್ಳಲಾಗಿತ್ತು. ಆದರೆ ರೈತರ ಹೋರಾಟದ ಬಿಸಿ ತೀವ್ರವಾದ ಹಿನ್ನೆಲೆಯಲ್ಲಿ ಸಿಎಂ ತುಮಕೂರು ಪ್ರವಾಸ ರದ್ದುಗೊಳಿಸಿದ್ದಾರೆ.
ಇದನ್ನೂ ಓದಿ : ಬಲವಂತದ ಮದುವೆಗೆ ಮುಂದಾದ ಪೋಷಕರು | ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ



















