ಬೆಂಗಳೂರು: ಕಲಬುರಗಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ 3 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಮೂರು ಬೋಧನಾ ಸಿಬ್ಬಂದಿಯನ್ನು (CUK Recruitment 2025) ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಪ್ರಕ್ರಿಯೆ ಹೇಗೆ? ಸಂದರ್ಶನ ನಡೆಯುವುದು ಯಾವಾಗ ಎಂಬುದು ಸೇರಿ ವಿವಿಧ ಮಾಹಿತಿ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ
ಒಟ್ಟು ಹುದ್ದೆಗಳು: 3
ಹುದ್ದೆಗಳ ಹೆಸರು: ಬೋಧನಾ ಸಿಬ್ಬಂದಿ
ನೇಮಕಾತಿ ವಿಧಾನ: ನೇರ ಸಂದರ್ಶನ
ಸಂದರ್ಶನದ ದಿನಾಂಕ: ನವೆಂಬರ್ 10
ಉದ್ಯೋಗ ಸ್ಥಳ: ಕಲಬುರಗಿ
ಕೇಂದ್ರೀಯ ವಿಶ್ವವಿದ್ಯಾಲಯದ ಅಧಿಸೂಚನೆ ಪ್ರಕಾರ, ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಸ್ನಾತಕೋತ್ತರ ಪದವಿ, ಎಂ.ಫಿಲ್, ಪಿಎಚ್.ಡಿ ಮುಗಿಸಿದವರು ಸಂದರ್ಶನಕ್ಕೆ ಹಾಜರಾಗಲು ಅರ್ಹರಾಗಿದ್ದಾರೆ. ಆಸಕ್ತಿ ಹೊಂದಿರುವ ಅಭ್ಯರ್ಥಿಗಳು hodhistory@cuk.ac.in ಇ-ಮೇಲ್ ವಿಳಾಸಕ್ಕೆ ಸ್ವವಿವರವನ್ನು ಕಳುಹಿಸಬಹುದಾಗಿದೆ.
ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಮೊದಲಿಗೆ cuk.ac.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡ ಬಳಿಕ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಅಗತ್ಯ ದಾಖಲೆಗಳೊಂದಿಗೆ ನಿಗದಿತ ದಿನಾಂಕದಂದು ನೇರ ಸಂದರ್ಶನಕ್ಕೆ ಹಾಜರಾಗಬೇಕು. ನೇಮಕಾತಿ ಹೊಂದಿದವರಿಗೆ ಮಾಸಿಕ 45 ಸಾವಿರ ರೂ. ಸಂಬಳ ನೀಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಸಂದರ್ಶನದ ಸ್ಥಳ
ಇತಿಹಾಸ ವಿಭಾಗ, ಕೇಂದ್ರೀಯ ವಿಶ್ವವಿದ್ಯಾಲಯ, ಕಲಬುರಗಿ
ಇದನ್ನೂ ಓದಿ: ಆಧಾರ್‌ಗೆ ನಿಮ್ಮ ಪ್ಯಾನ್ ಕಾರ್ಡ್ ಲಿಂಕ್ ಆಗಿದೆಯೇ? ಹೀಗೆ ಚೆಕ್ ಮಾಡಿ



















