ಚಿಕ್ಕೋಡಿ: ಕಬ್ಬು ದರ ನಿಗದಿಗಾಗಿ ರೈತರು ನಡೆಸುತ್ತಿರುವ ಹೋರಾಟ ಇದೀಗಾ ಹಿಂಸಾಚಾರಕ್ಕೆ ತಿರುಗಿದೆ. ಉದ್ವಿಗ್ನಗೊಂಡ ಪ್ರತಿಭಟನಾಕಾರರ ಗುಂಪು, ಪೊಲೀಸರು ಮತ್ತು ಪೊಲೀಸ್ ವಾಹನಗಳ ಮೇಲೆಯೇ ಕಲ್ಲು ತೂರಾಟ ನಡೆಸಿದ್ದಾರೆ.
ಸರ್ಕಾರದ ನಿರ್ಧಾರ ಪ್ರಕಟಕ್ಕೂ ಮುನ್ನವೇ ಹತ್ತರಗಿ ಟೋಲ್ ಬಳಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ, ರೈತರು ಪ್ರತಿಭಟನೆ ಮಾಡುವ ವೇಳೆ ಈ ಘಟನೆ ನಡೆದಿದೆ. ಲೀಸ್ ವಾಹನಗಳ ಮೇಲೂ ಕಲ್ಲು ತೂರಾಟ ನಡೆಸಿದ್ದು, ಪರಿಸ್ಥಿತಿ ನಿಯಂತ್ರಿಸಲಾಗದೇ ಸ್ಥಳದಿಂದ ಪೊಲೀಸರು ಓಡಿದ್ದಾರೆ.
ಪ್ರತಿಭಟನೆ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿ 4ರ ಹತ್ತರಗಿ ಟೋಲ್ ಬಳಿ ಪೊಲೀಸ್ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿತ್ತು. 250ಕ್ಕೂ ಹೆಚ್ಚು ಪೊಲೀಸರು ನಿಯೋಜನೆಗೊಂಡಿದ್ದರು. ಪ್ರತಿಭಟನೆ ಮಾಡುವ ರೈತರನ್ನು ವಶಕ್ಕೆ ಪಡೆಯಲು 5 ಕೆಎಸ್‌ಆರ್‌ಟಿಸಿ ಬಸ್‌ಗಳ ವ್ಯವಸ್ಥೆ ಮಾಡಲಾಗಿತ್ತು.
ರೈತರನ್ನು ವಶಕ್ಕೆ ಪಡೆಯಲು ಪೊಲೀಸರು ಮುಂದಾದಾಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೈಡ್ರಾಮಾವೇ ನಡೆಯಿತು. ರೈತರನ್ನು ಒತ್ತಾಯಪೂರ್ವಕವಾಗಿ ರಸ್ತೆಯಿಂದ ವಾಪಸ್ ಕಳುಹಿಸಲು ಪೊಲೀಸರು ಮುಂದಾಗಿದ್ದ ವೇಳೆ ಪೊಲೀಸರು ಹಾಗೂ ರೈತರ ನಡುವೆ ಜಟಾಪಟಿ ನಡೆದಿದೆ.
ಇದನ್ನೂ ಓದಿ: ಕಬ್ಬು ಬೆಳೆಗಾರರ ಹೋರಾಟ ತೀವ್ರ | ಸಿಎಂ ಸಿದ್ದರಾಮಯ್ಯ ತುಮಕೂರು ಪ್ರವಾಸ ರದ್ದು!



















