ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತ್ ಅರ್ತ್ ಮೂವರ್ಸ್ ಲಿಮಿಟೆಡ್ (BEML Junior Executive Recruitment 2025) ಖಾಲಿ ಇರುವ 100 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಭರ್ತಿ 100 ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ನವೆಂಬರ್ 12ರೊಳಗೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಭಾರತ್ ಅರ್ತ್ ಮೂವರ್ಸ್ ಲಿಮಿಟೆಡ್ (BEML)
ಹುದ್ದೆ ಹೆಸರು: ಜೂನಿಯರ್ ಎಕ್ಸಿಕ್ಯೂಟಿವ್
ಒಟ್ಟು ಹುದ್ದೆಗಳು: 100
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ನವೆಂಬರ್ 12
ಕರ್ನಾಟಕದ ಬೆಂಗಳೂರಿನಲ್ಲಿಯೇ ಕೇಂದ್ರ ಸರ್ಕಾರದ ಹುದ್ದೆಗಳನ್ನು ಹುಡುಕುತ್ತಿರುವವರಿಗೆ ಇದು ಒಳ್ಳೆಯ ಅವಕಾಶವಾಗಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿ.ಇ ಅಥವಾ ಬಿ.ಟೆಕ್ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. ಅರ್ಜಿಗಳನ್ನು ಸಲ್ಲಿಸುವವರಿಗೆ ಗರಿಷ್ಠ 29 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಒಬಿಸಿಯವರಿಗೆ 3 ವರ್ಷಗಳ ಸಡಿಲಿಕೆ ಅನ್ವಯವಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 43 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವವರಿಗೆ ಯಾವುದೇ ಶುಲ್ಕ ನಿಗದಿಪಡಿಸಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ನಡೆಸಲಾಗುತ್ತದೆ. ಇದಾದ ಬಳಿಕ ಅರ್ಹರನ್ನು ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು bemlindia.in ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.
ಇದನ್ನೂ ಓದಿ : ದಾವಣಗೆರೆ | ಅಕ್ರಮ ಪಡಿತರ ರಾಗಿ ಸಾಗಾಟ : ಆರೋಪಿ ಅರೆಸ್ಟ್



















